ಬೆಂಗಳೂರು: ರಾಜ್ಯದ 12 ಕ್ರೀಡಾ ಪಟುಗಳು ರಾಷ್ಟ್ರೀಯ ಕ್ರೀಡಾ ಕೂಟಗಳಲ್ಲಿ ಪದಕ ಗೆದ್ದು, ರಾಜ್ಯ, ರಾಷ್ಟ್ರಕ್ಕೆ ಕೀರ್ತಿ ತಂದಿದ್ದರು. ಇಂತಹ ರಾಜ್ಯದ 12 ಕ್ರೀಡಾಪಟುಗಳಿಗೆ ಇಂದು ಸಿಎಂ ಸಿದ್ಧರಾಮಯ್ಯ ಅವರು ಸರ್ಕಾರಿ ಉದ್ಯೋಗ ನೇಮಕಾತಿ ಪತ್ರವನ್ನು ವಿತರಿಸಿದರು.
ಈ ಬಳಿಕ ಮಾತನಾಡಿದಂತ ಅವರು ನಾನು ಮುಖ್ಯಮಂತ್ರಿಯಾಗಿದ್ದಂತ ಸಂದರ್ಭದಲ್ಲಿ ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಗೆಲುವು ಸಾಧಿಸುವಂತ ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಘೋಷಿಸಿದ್ದೆ. 2016-17ರಲ್ಲಿ ಒಲಂಪಿಕ್ಸ್ ಗೇಮ್ಸ್ ನಲ್ಲಿ ಗೆದ್ದಂತವರಿಗೆ ಸರ್ಕಾರಿ ಉದ್ಯೋಗವನ್ನು ನೀಡುವುದಾಗಿ ಹೇಳಿದ್ದೆ. ನನ್ನ ಅಧಿಕಾರಾವಧಿಯ ಬಳಿಕ ಆ ಕಾರ್ಯ ಅಲ್ಲಿಗೆ ನಿಂತಿತ್ತು ಎಂದರು.
ನಾನು ಮತ್ತೆ ಅಧಿಕಾರಕ್ಕೆ ಬಂದ ಮೇಲೆ ಘೋಷಣೆ ಮಾಡಿದಂತ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗಿಯಾಗಿ ಪದಕ ಗೆದ್ದಿದ್ದಂತ ರಾಜ್ಯದ 12 ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದ ನೇಮಕಾತಿ ಆದೇಶ ಪತ್ರವನ್ನು ನೀಡಿದ್ದೇನೆ. ಕ್ರೀಡಾಪಟುಗಳು ರಾಜ್ಯ, ರಾಷ್ಟ್ರಕ್ಕೆ ಕೀರ್ತಿ ತಂದುಕೊಡುವಂತ ಕೆಲಸ ಮಾಡಬೇಕು ಎಂದರು.
ರಾಜ್ಯ ಸರ್ಕಾರದ ಸ್ಫೂರ್ತಿದಾಯಕ ನಡೆ
ಮುಖ್ಯಮoತ್ರಿ ಸಿದ್ದರಾಮಯ್ಯ ಅವರು ಭಾನುವಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿoದ ಒಲoಪಿಕ್ಸ್, ಪ್ಯಾರಾಲಿoಪಿಕ್ಸ್, ಏಷಿಯನ್ ಗೇಮ್ಸ್, ಪ್ಯಾರಾ ಏಷಿಯನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ ಗಳಲ್ಲಿ ಪದಕ ವಿಜೇತ ಸಾಧಕ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಗ್ರೂಪ್ ಎ, ಬಿ ಮತ್ತು ಇತರ ಹುದ್ದೆಗಳಿಗೆ ನೇಮಕಾತಿಗೆ ಆಫರ್ ಲೆಟರ್ ವಿತರಿಸಿದರು.
ಮುಖ್ಯಮoತ್ರಿ ಅವರ ರಾಜಕೀಯ ಕಾರ್ಯದರ್ಶಿ ಕೆ. ಗೋವಿoದ ರಾಜು, ಯುವ ಸಬಲೀಕರಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎನ್. ಮoಜುನಾಥ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.