ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಘಾತಕಾರಿ ಘಟನೆಯೊಂದು ವರದಿಯಾಗಿದ್ದು, ವಿಕೃತ ಕಾಮುಕನೊಬ್ಬ ವಾಕಿಂಗ್ ಹೋಗುತ್ತಿದ್ದ ಮಹಿಳೆಯನ್ನು ಬಲವಂತವಾಗಿ ತಬ್ಬಿಕೊಂಡು ಚುಂಬಿಸಿದ ಘಟನೆ ನಡೆದಿದೆ.
ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ಕೃಷ್ಣ ನಗರದಲ್ಲಿ ಆಗಸ್ಟ್ 2ರಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಘಟನೆ ನಡೆದಿದೆ.
ಕೃಷ್ಣ ನಗರದಲ್ಲಿ ವಾಕಿಂಗ್ ಹೋಗಲು ರಸ್ತೆ ಬದಿ ನಿಂತಿದ್ದ ಮಹಿಳೆಯನ್ನು ನೋಡಿದ ವಿಕೃತ ಕಾಮಿಯೊಬ್ಬ ಮಹಿಳೆ ಬಳಿ ಹೋಗಿ ಬಲವಂತವಾಗಿ ತಬ್ಬಿ ಚುಂಬಿಸಿ ಪರಾರಿಯಾಗಿದ್ದಾನೆ. ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಸಿಸಿಟಿವಿ ಕ್ಯಾಮರಾ ದೃಶ್ಯವಳಿಯ ಮೂಲಕ ಆರೋಪಿ ಪತ್ತೆಗಾಗಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.