ಚಿತ್ರದುರ್ಗ : ಡೆತ್ ನೋಟ್ ಬರೆದಿಟ್ಟು ಖಾಸಗಿ ಬ್ಯಾಂಕ್ ಉದ್ಯೋಗಿಯೊಬ್ಬರು ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಖಾಸಗಿ ಲಾಡ್ಜ್ ನಲ್ಲಿ ಐಡಿಎಫ್ ಸಿ ಬ್ಯಾಂಕ್ ಉದ್ಯೋಗಿ ಎಂ.ಸಂತೋಷ್ (40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೊಸದುರ್ಗದ ಖಾಸಗಿ ಲಾಡ್ಜ್ ನಲ್ಲಿ ಉಳಿದುಕೊಂಡಿದ್ದ ಸಂತೋಷ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.