ಬೆಂಗಳೂರು: ವರಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಮಹಿಳೆಯರ ಖಾತೆಗೆ ಇಂದು ಅಥವಾ ನಾಳೆ ಹಣ ಜಮೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
BIG NEWS : ಜನರಲ್ ವಾಕರ್-ಉಸ್-ಜಮಾನ್ ಬಗ್ಗೆ ಶೇಖ್ ಹಸೀನಾಗೆ ಮೊದಲೇ ಎಚ್ಚರಿಕೆ ನೀಡಿದ್ದ ಭಾರತ!
Health Tips: ನಿಮ್ಮ ಲೈಂಗಿಕ ಆರೋಗ್ಯವನ್ನು ಸುಧಾರಿಸಲು ಈ ಆಹಾರಗಳನ್ನು ಮಿಸ್ ಮಾಡದೇ ಸೇವಿಸಿ…!
ಇದರೊಂದಿಗೆ ಕಳೆದ ಎರಡು ತಿಂಗಳಿನಿಂದ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರಿಗೆ ನೆಮ್ಮದಿ ಸಿಕ್ಕಿದೆ. ನಾಳೆಯೊಳಗೆ 26.65 ಲಕ್ಷ ಅರ್ಹ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದೆ. ಮೊದಲ ಹಂತದಲ್ಲಿ 533 ಕೋಟಿ ರೂ. ಪಾವತಿಯಾಗಲಿದೆ. ಮೊದಲ ಹಂತದಲ್ಲಿ ಬೆಳಗಾವಿ, ಕಲಬುರ್ಗಿ, ಬೀದರ್, ವಿಜಯಪುರ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ.
ಇನ್ನೂ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡು ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯುತ್ತಿರುವ ಮಹಿಳೆಯರಿಗೂ ಇನ್ಮುಂದೆ ಗೃಹ ಲಕ್ಷ್ಮಿ ಹಣ ಬರುವುದಿಲ್ಲ ಎನ್ನಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಮುಖ್ಯವಾಗಿ ಬಿಪಿಎಲ್ ಕಾರ್ಡ್ ಕಡ್ಡಾಯವಾಗಿದ್ದು, ಬಿಪಿಎಲ್ ಕಾರ್ಡ್ ರದ್ದಾದ್ದರೆ ಗೃಹಲಕ್ಷ್ಮಿ ಹಣವೂ ರದ್ದಾಗಲಿದೆ ಎನ್ನಲಾಗಿದೆ.