ಕೆಎನ್ಎನ್ಡಿಜಿಟಲ್ ಡೆಸ್ಕ್ : ಬಾಂಗ್ಲಾದೇಶದಲ್ಲಿ ಬಿಕ್ಕಟ್ಟು ಉಲ್ಬಣಗೊಳ್ಳುತ್ತಿದೆ. ಶೇಖ್ ಹಸೀನಾ ಈಗಾಗಲೇ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಭಾರತಕ್ಕೆ ಬಂದಿದ್ದಾರೆ. ಇನ್ನೊಂದೆಡೆ ತಾತ್ಕಾಲಿಕ ಸೇನಾ ಸರಕಾರ ರಚನೆಯಾಗುತ್ತಿದೆ ಎಂಬ ಪ್ರಚಾರವೂ ನಡೆದಿದೆ. ಸಧ್ಯ ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಸಂಸತ್ತನ್ನು ವಿಸರ್ಜಿಸಿದರು. ದೇಶದಲ್ಲಿ ಉದ್ಭವಿಸಿರುವ ರಾಜಕೀಯ ಬಿಕ್ಕಟ್ಟಿನಿಂದಾಗಿ ಸಂಸತ್ತನ್ನ ವಿಸರ್ಜಿಸಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ. ಇನ್ನು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳಲ್ಲಿ ಸಂಸತ್ ವಿಸರ್ಜನೆಯೂ ಒಂದು ಎಂಬುದು ಗೊತ್ತಾಗಿದೆ.
ಸರ್ಕಾರಕ್ಕೆ ಸಂಬಂಧವಿಲ್ಲದ ವ್ಯಕ್ತಿಗೆ ‘ಪ್ರೊಟೋಕಾಲ್’ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ