ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿಡಿಯೋ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ದೂರು ನೀಡಿದ್ದರು. ಇದರ ಬೆನ್ನಲ್ಲೆ ಇದೀಗ ಅಬ್ರಹಾಂ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಲು ರಾಜಭವನಕ್ಕೆ ಆಗಮಿಸಿದ್ದು, ತೀವ್ರ ಕುತೂಹಲ ಮೂಡಿಸಿದೆ.
ಟಿಜೆ ಅಬ್ರಾಹಂ ನೀಡಿದ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ನಿಮ್ಮ ವಿರುದ್ಧ ಏಕೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬಾರದು ಎಂದು ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಹಲ್ಚಲ್ ಎದ್ದಿದೆ. ಇನ್ನು ರಾಜ್ಯಪಾಲರು ದೆಹಲಿ ಪ್ರವಾಸದಿಂದ ಬೆಂಗಳೂರಿಗೆ ವಾಪಸ್ ಆಗಿದ್ದು. ಇದರ ಬೆನ್ನಲ್ಲೇ ಸಾಮಾಜಿ ಕಾರ್ಯಕರ್ತ ಟಿಜೆ ಅಬ್ರಾಹಂ ಅವರು ಇಂದು ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ.
ಇನ್ನೂ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ನೀಡಿರುವ ಶೋಕಾಸ್ ನೋಟಿಸ್ ವಾಪಸ್ ಪಡೆಯಬೇಕೆಂದು ಸಚಿವ ಸಂಪುಟ ನಿರ್ಣಯ ಅಂಗೀಕರಿಸಿದೆ. ಆದ್ರೆ, ಇದೀಗ ರಾಜ್ಯಪಾಲರು ನಿರ್ಣಯ ಅಂಗೀಕಾರ ಧಿಕ್ಕರಿಸಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುತ್ತಾರಾ? ನೋಟಿಸ್ ವಾಪಾಸ್ ಪಡೆಯುತ್ತರ ಎಂಬುದರ ಕುರಿತು ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರವಾಗಲಿದೆ.