ಮಂಗಳೂರು : ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ 13 ವರ್ಷದ ಬಾಲಕಿಯ ಕುತ್ತಿಗೆ ಬಿಗಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು ಜಿಲ್ಲೆಯ ಹೊರಭಾಗದ ಜೋಕಟ್ಟೆ ಎಂಬ ಸ್ಥಳದಲ್ಲಿ ಈ ಒಂದು ಘಟನೆ ನಡೆದಿದೆ.
ಹೌದು ಮಂಗಳೂರು ಹೊರವಲಯದ ಜೋಕಟ್ಟೆ ಪ್ರದೇಶದಲ್ಲಿ ಈ ಒಂದು ದುಷ್ಕೃತ್ಯ ನಡೆದಿದೆ. ಬೆಳಗಾವಿ ಮೂಲದ 13 ವರ್ಷದ ಬಾಲಕಿಯ ಕಗ್ಗೊಲೆ ನಡೆದಿದೆ ಚಿಕಿತ್ಸೆ ಪಡೆಯಲು ಬಾಲಕಿ ಸಂಬಂಧಿಕರ ಮನೆಗೆ ಬಂದಿದ್ದಳು. ಈ ವೇಳೆ ಆಕೆಯನ್ನು ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಕೇಸ್ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.