ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಆಗಸ್ಟ್ 10 ರವರೆಗೆ ಅವಕಾಶ ನೀಡಲಾಗಿದೆ.
ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಆಗಸ್ಟ್ 10 ರ ವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ.
ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ
ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಅನ್ನು ಹೊಂದಿರಬೇಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ. ಈ ಎರಡು ದಾಖಲೆಗಳು ಇದ್ದರೆ ನೀವು ಆನ್ಲೈನ್ ಮುಖಾಂತರ ರೇಷನ್ ಕಾರ್ಡ್ನಲ್ಲಿ ನಿಮ್ಮ ಹೆಸರನ್ನು ಸೇರಿಸಬಹುದು.
ಏನಲ್ಲಾ ಬದಲಾವಣೆ ಮಾಡಬಹುದು?
ಕುಟುಂಬ ಸದಸ್ಯರ ಹೆಸರು ತಿದ್ದುಪಡಿ.
ಮನೆ ಯಜಮಾನರ ಬದಲಾವಣೆ
ಹೊಸ ಸದಸ್ಯರ ಸೇರ್ಪಡೆ
ವಿಳಾಸ ಬದಲಾವಣೆ
ಮೃತರ ಅಥವಾ ಬೇರೆ ಕುಟುಂಕ್ಕೆ ಸೇರಿದವರ ಹೆಸರು ತೆಗೆಯುವುದು.
ಫೋಟೋ ಮತ್ತು ಬಯೋಮೆಟ್ರಿಲ್ ಅಪ್ಡೇಟ್
ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿ ತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.
ತಿದ್ದುಪಡಿ ಮಾಡುವುದ ಹೇಗೆ?
ಅಧಿಕೃತ ವೆಬ್ ಸೈಟ್ ಗೆ https://ahara.kar.nic.in/home ಭೇಟಿ ನೀಡಿ
ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.
ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.
ಹೊಸ ಪೇಜ್ ನಲ್ಲಿ ಫಾರ್ಮ್ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅನಲೋಡ್ ಮಾಡಿ.
ಅಪ್ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮೀಟ್ ಮಾಡಿ.
ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನಗೆ ಅಪ್ಡೇಟ್ ಆಗಿರುವ ಹೊಸ ಪಡಿತರ ಚೀಟಿ ನೀಡಲಾಗುತ್ತದೆ.
ಎಲ್ಲಿ ತಿದ್ದುಪಡಿ ಮಾಡಬೇಕು
ತಿದ್ದುಪಡಿ ಮಾಡಿಕೊಳ್ಳುವವರು ಹತ್ತಿರವಿರುವ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಕ್ಕೆ ಅಗತ್ಯ ದಾಖಲೆಯೊಂದಿಗೆ ತೆರಳಿ ಆನ್ಲೈನ್ ಅರ್ಜಿ ಸಲ್ಲಿಸಿ ತಿದ್ದುಪಡಿ ಮಾಡಿಕೊಳ್ಳಬೇಕು. ಆಗಸ್ಟ್ 10 ರವರೆಗೆ ಬೆಳಗ್ಗೆ 10 ರಿಂದ ಸಂಜೆ 5ರವರೆಗೆ ತಿದ್ದುಪಡಿಗೆ ಅವಕಾಶವಿದೆ. ಕೇವಲ ಅನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದು. ಯಾವುದೆ ಕೈಬರಹ ಹಾಗೂ ಮುದ್ರಿತ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಇಲಾಖೆ ತಿಳಿಸಿದೆ.