ಬೆಂಗಳೂರು : ಒಂದು ಕಡೆ ಮುಡಾ ಹಗರಣ ಖಂಡಿಸಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಬಿಜೆಪಿ ಹಾಗೂ ಜೆಡಿಎಸ್ ಮೈಸೂರು ಚಲೋ ಪಾದಯಾತ್ರ ಆರಂಭಿಸಿದ್ದರೆ, ಇನ್ನೊಂದು ಕಡೆ ಸದಾ ಸಿದ್ದರಾಮಯ್ಯರನ್ನು ಟೀಕಿಸುತ್ತಾ ಬಂದಿರುವ, ಬಿಕೆ ಹರಿಪ್ರಸಾದ್ ಅವರು, ಇಂದು ಸಿದ್ದರಾಮಯ್ಯ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದು ತೀವ್ರ ಅಚ್ಚರಿ ಮೂಡಿಸಿದೆ.
ಹೌದು ಕಾಂಗ್ರೆಸ್ ಪಾಳಯದಲ್ಲಿ ಇದೀಗ ಅಚ್ಚರಿಯ ಬೆಳವಣಿಗೆ ಆಗಿದ್ದು, ಸಿಎಂ ಸಿದ್ದರಾಮಯ್ಯ ಅವರನ್ನು ಬಿಕೆ ಹರಿಪ್ರಸಾದ್ ಅವರು ಭೇಟಿ ಮಾಡಿದ್ದಾರೆ. ಈ ಒಂದು ಭೇಟಿ ಭಾರಿ ಮಹತ್ವ ಪಡೆದುಕೊಂಡಿದೆ. ಸಿಎಂ ಭೇಟಿಯಾಗಿ ಬಿಕೆ ಹರಿ ಪ್ರಸಾದ್ ಚರ್ಚೆ ಮಾಡಿದ್ದಾರೆ.ಸಿಎಂ ನಿವಾಸಕ್ಕೆ ಆಗಮಿಸಿ ಹರಿಪ್ರಸಾದ್ ಮಾತುಕತೆ ನಡೆಸಿದ್ದಾರೆ.
ಹಾಗಾಗಿ ಈ ಒಂದು ಭೇಟಿ ಭಾರಿ ಕುತೂಹಲ ಮೂಡಿಸಿದೆ. ಉಭಯ ನಾಯಕರ ಭೇಟಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಬಲ್ಲ ಮೂಳಗಳಿಂದ ತಿಳಿದುಬಂದಿದೆ. ಹಿಂದುಳಿದ ನಾಯಕರ ಸಂಬಂಧ ಗಟ್ಟಿ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಮುಂದಿನ ರಾಜಕೀಯ ನಡೆ ಬಗ್ಗೆ ಕೂಡ ಚರ್ಚಿಸಲಾಗಿದೆ.
ಪ್ರತ್ಯೇಕ ಕೊಠಡಿಗಳಲ್ಲಿ ಸುಮಾರು ಒಂದು ಗಂಟೆಗಳವರೆಗೆ ಚರ್ಚೆ ಮಾಡಿದ್ದಾರೆ. ಸಿಬ್ಬಂದಿಗಳನ್ನು ಎಲ್ಲರನ್ನೂ ಹೊರಗೆ ಕಳುಹಿಸಿ ಕೇವಲ ಇಬ್ಬರೇ ಒಂದೇ ಕೊಠಡಿಯಲ್ಲಿ ಸುಧೀರ್ಘವಾಗಿ ಚರ್ಚೆ ಮಾಡಿದ್ದಾರೆ. ಈ ಒಂದು ಭೇಟಿಯು ಬಿಕೆ ಹರಿಪ್ರಸಾದ್ ಅವರು ಸಿದ್ದರಾಮಯ್ಯ ಅವರ ಪರ ನಿಲ್ಲುತ್ತಾರಾ ಎನ್ನುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.