ಮಂಡ್ಯ : ಮುಡಾ ಹಗರಣ ಖಂಡಿಸಿ ಬಿಜೆಪಿ ಹಾಗೂ ಜೆಡಿಎಸ್ ಪಾರಿಯಾತ್ರೆ ಆರಂಭಿಸಿದ್ದು ಇಂದು 5ನೇ ದಿನವಾಗಿದ್ದರಿಂದ ಮಂಡ್ಯ ಜಿಲ್ಲೆಗೆ ಪಾದಯಾತ್ರೆ ತಲುಪಿತು. ಆದರೆ ಇವತ್ತು ಬಿಜೆಪಿಯ ಮಾಜಿ ಶಾಸಕ ಪ್ರೀತಂ ಗೌಡ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರಿಂದ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಗಲಾಟೆ ಉಂಟಾಯಿತು.
ಹೌದು ಪಾದಯಾತ್ರೆ ಆರಂಭಕ್ಕೂ ಮುನ್ನ ಎಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿ ಹೈಕಮಾಂಡ್ಗೆ ಖಡಕ್ ಸಂದೇಶವನ್ನು ಕಳುಹಿಸಿದ್ದರು. ನಮ್ಮ ಪಕ್ಷದವರು ಪಾದಯಾತ್ರೆಯಲ್ಲಿ ಭಾಗವಹಿಸಬೇಕಾದರೆ ಪ್ರೀತಂ ಗೌಡ ಪಾದಯಾತ್ರೆಯಲ್ಲಿ ಎಲ್ಲಿಯೂ ಕಾಣಿಸಿಕೊಳ್ಳಬಾರದು ಎಂಬ ಶರತ್ತು ವಿಧಿಸಿದ್ದರು. ಇದಕ್ಕೆ ಬಿಜೆಪಿ ನಾಯಕರು ಕೂಡ ಸಮ್ಮತಿಸಿದ್ದರು.
ಬಿಜೆಪಿ ನಾಯಕರ ಮನವೊಲಿಕೆಯಿಂದ ಹೆಚ್ ಡಿ ಕುಮಾರಸ್ವಾಮಿ ಈ ಒಂದು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಆದರೆ ಇಂದು ಬಿಜೆಪಿಯ ಮಾಜಿ ಶಾಸಕ ಪ್ರೀತಮ್ ಗೌಡ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಹಜವಾಗಿ ಎಚ್ ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಮುಖಂಡರು ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ. ಇವಳೆ ಪಾದಯಾತ್ರೆ ಸಂದರ್ಭದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಹೊಡೆದಾಟ ನಡೆದಿದೆ.
ಅಂತರ ಕಾಯ್ದುಕೊಂಡ ಜೆಡಿಎಸ್ ಮುಖಂಡರು
ಈ ವೇಳೆ ಇಂದು ಪಾದಯಾತ್ರೆಯು ಮಂಡ್ಯ ಜಿಲ್ಲೆಯ ತೂಬಿನಕೆರೆ ತಲುಪಿತು. ಆದರೆ ಬಿಜೆಪಿಯವರು ತಲುಪಿದ ಅರ್ಧ ಗಂಟೆ ನಂತರ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಆಗಮಿಸಿದ್ದಾರೆ. ಪ್ರೀತಂ ಗೌಡ ಬೆಂಬಲಿಗರ ಜೊತೆ ಸಂಘರ್ಷದ ಬಳಿಕ ಇದೀಗ ಜೆಡಿಎಸ್ ನಾಯಕರು ಹಾಗೂ ಮುಖಂಡರು ಕಾರ್ಯಕರ್ತರು ಅಂತರ ಕಾಯ್ದುಕೊಂಡಿದ್ದಾರೆ. ಮಧ್ಯಾಹ್ನದ ಊಟದ ನಂತರ ಜೆಡಿಎಸ್ ಮುಖಂಡರು ಇದೀಗ ಬಿಜೆಪಿಯೊಂದಿಗೆ ಅಂತರ ಕಾಯ್ದುಕೊಂಡಿದ್ದಾರೆ.