ಢಾಕಾ : ನೊಬೆಲ್ ಪ್ರಶಸ್ತಿ ವಿಜೇತ ಮೊಹಮ್ಮದ್ ಯೂನುಸ್ ನೇತೃತ್ವದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ರಚನೆಯಾಗಲಿದ್ದು, ಇಂದು ಪ್ರಮಾಣವಚನ ಸ್ವೀಕಾರ ನಡೆಯಲಿದೆ ಎಂದು ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಜಮಾನ್ ಹೇಳಿದ್ದಾರೆ.
ಮಧ್ಯಂತರ ಸರ್ಕಾರ ಇಂದು ರಾತ್ರಿ 8 ಗಂಟೆಗೆ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಜನರಲ್ ವೇಕರ್ ಸುದ್ದಿಗಾರರಿಗೆ ತಿಳಿಸಿದರು, ಸಲಹಾ ಮಂಡಳಿಯಲ್ಲಿ 15 ಸದಸ್ಯರು ಇರಬಹುದು ಎಂದು ಹೇಳಿದರು.
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನ ಹಿಂಸಾತ್ಮಕವಾಗಿ ಪದಚ್ಯುತಗೊಳಿಸಿದ ನಂತರ ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಮಂಗಳವಾರ 84 ವರ್ಷದ ಯೂನುಸ್ ಅವರನ್ನು ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ನೇಮಿಸಿದ್ದಾರೆ.