ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ನಡೆಸುತ್ತಿರುವ ಪಾದಯಾತ್ರೆ 6 ನೇ ದಿನಕ್ಕೆ ಕಾಲಿಟ್ಟಿದ್ದು, ಮಾಜಿ ಸಂಸದೆ ಸುಮಲತಾ ಅಂಬರೀಶ್ ಪಾದಯಾತ್ರೆಯಿಂದ ದೂರು ಉಳಿದಿದ್ದಾರೆ.
ಬಿಜೆಪಿ, ಜೆಡಿಎಸ್ ಪಕ್ಷಗಳ ಪಾದಯಾತ್ರೆ 6 ನೇ ದಿನಕ್ಕೆ ಕಾಲಿಟ್ಟಿದ್ದು, ಶಂಖನಾದದ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಗಿದೆ. ಮಂಡ್ಯ ತಾಲೂಕಿನ ತೂಬಿನಕೆರೆಯಿಂದ ಇಂದು ಪಾದಯಾತ್ರೆ ಹೊರಟಿದ್ದು, ಬಿಜೆಪಿ ನಾಯಕರು ಸೇರಿದಂತೆ ಸಾವಿರಾರು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.
ಇನ್ನು ಈ ಪಾದಯಾತ್ರೆಯಲ್ಲಿ ಮಂಡ್ಯದ ಮಾಜಿ ಸಂಸದೆ ಸುಮಲತಾ ಭಾಗಿಯಾಗದೇ ದೂರ ಉಳಿದಿದ್ದಾರೆ. ಆದರೆ ಇಂದು ಸುಮಲತಾ ಪಾದಯಾತ್ರೆಯಲ್ಲಿ ಭಾಗಿಯಾಗ್ತಾರಾ ಎಂಬುದನ್ನು ಕಾದು ನೋಡಬೇಕಾಗಿದೆ.
LIVE:- ಮೈಸೂರು ಚಲೋ ಪಾದಯಾತ್ರೆ | Day 06 |#MysuruChalo #BJPJDSPadayatre #ScamSarkara #ಮೈಸೂರುಚಲೋ #ಪಾದಯಾತ್ರೆ #Day6https://t.co/4WKNiDO7Dq
— BJP Karnataka (@BJP4Karnataka) August 8, 2024