ಬೆಂಗಳೂರು: ಒಂದೆಡೆ ಸಿಎಂ ಸಿದ್ಧರಾಮಯ್ಯ ಕುಟುಂಬದ ವಿರುದ್ಧದ ಮುಡಾ ಹಗರಣ ಸಂಬಂಧ ಬಿಜೆಪಿ-ಜೆಡಿಎಸ್ ನಾಯಕರು ಮೈಸೂರು ಚಲೋ ಪಾದಯಾತ್ರೆಯನ್ನು ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ಮುಡಾ ಹಗರಣದಲ್ಲಿ ಮತ್ತೊಂದು ಸಂಕಷ್ಟ ಎನ್ನುವಂತೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ.
ಮೈಸೂರಿನ ಆರ್ ಟಿ ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಖಾಸಗಿ ದೂರು ದಾಖಲಿಸಿದ್ದಾರೆ.
ನ್ಯಾಯಮೂರ್ತಿ ಗಜಾನನ ಭಟ್ ಅವರು ದಾಖಲೆಗಳ ಪರಿಶೀಲನೆಗೆ ಒಪ್ಪಿಸಲಾಗಿದ್ದು, ಈ ಖಾಸಗಿ ದೂರಿನ ಪ್ರಕರಣದ ವಿಚಾರಣೆಯನ್ನು ಆಗಸ್ಟ್.9ರ ನಾಳೆಗೆ ವಿಚಾರಣೆ ಬರುವ ನಿರೀಕ್ಷೆಯಿದೆ.
ಫಿರ್ಯಾದುದಾರರ ಪರವಾಗಿ ಹೈಕೋರ್ಟ್ ನ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್ ಗುರುವಾರ ಮಧ್ಯಾಹ್ನ 1 ಗಂಟೆಗೆ ದೂರನ್ನು ಬೆಂಗಳೂರಿನ ಜನಪ್ರತಿನಿಧಿಗಳನ ನ್ಯಾಯಾಲಯದಲ್ಲಿ ಖಾಸಗಿ ದೂರನ್ನು ಮುಡಾ ಹಗರಣ ಸಂಬಂಧ ದಾಖಲಿಸಿದ್ದಾರೆ. ಹೈಕೋರ್ಟ್ ವಕೀಲ ವಸಂತ ಕುಮಾರ್ ವಕಾಲತ್ತು ವಹಿಸಿದ್ದಾರೆ. ನಾಳೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಹೈಕೋರ್ಟ್ ವಿಚಾರಣೆ ನಡೆಸಲಿದ್ದು, ಯಾವ ಸೂಚನೆ, ತೀರ್ಪು ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಆ.9ರಂದು ನೀಟ್ ಪಿಜಿ 2024 ಮುಂದೂಡಿಕೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ | NEET PG 2024
BREAKING :`PG’ ವೈದ್ಯರ ಕಡ್ಡಾಯ ಸೇವಾ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ | Karnataka High Court