ಶಿವಮೊಗ್ಗ : ಸಮರ್ಥನಂ ಅಂಗವಿಕಲ ಸಂಸ್ಥೆಯವರು ಜೆಎಸ್ಎಸ್ ಪಾಲಿಟೆಕ್ನಿಕ್ ಫಾರ್ ದಿ ಡಿಫರೆಂಟ್ಲಿ ಏಬಲ್ಡ್ ಜೆಎಸ್ಎಸ್ ಇನ್ಸ್ ಸ್ಟಿಟ್ಯೂಷನ್ಸ್ ಕ್ಯಾಂಪಸ್, ಮಾನಸ ಗಂಗೋತ್ರಿ ಮೈಸೂರು ಇಲ್ಲಿ ಆ .10 ರಂದು ಬೆಳಗ್ಗೆ 9.00 ಕ್ಕೆ ವಿಕಲಚೇತನರ ಉದ್ಯೋಗ ಮೇಳವನ್ನು ಆಯೋಜಿಸಿದೆ.
ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು ಹೆಚ್ಚಿನ ಮಾಹಿತಿಗಾಗಿ ಸಮರ್ಥನಂ ಸಂಸ್ಥೆಯ ಸಿಬ್ಬಂದಿಗಳಾದ ವೀರಭದ್ರಪ್ಪ ಪಾಟೀಲ್ ಮೊ.ನಂ.: 9480812121 ಹಾಗೂ ಸುಭಾಷ್ ಮೊ.ನಂ.: 9449864693 ಗಳನ್ನು ಅಥವಾ ಇ-ಮೇಲ್ placements@samarthanam.org, centerhead Bangalore@ samarthanam.org ಗಳನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಪ್ರಶಸ್ತಿಗೆ ಅರ್ಜಿ ಆಹ್ವಾನ
ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಅಕ್ಟೋಬರ್ 1 ರಂದು ವಿಶ್ವ ಹಿರಿಯ ನಾಗರೀಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ವ್ಯಕ್ತಿಗಳು ಮತ್ತು ಸಂಸ್ಥೆಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಶಿಕ್ಷಣ, ಸಾಹಿತ್ಯ,ಕಲೆ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರೀಕರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರೀಕರಿಗೆ 06 ವೈಯಕ್ತಿಕ ಹಾಗೂ ಹಿರಿಯ ನಾಗರೀಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ 01 ಸಂಸ್ಥೆ ಸೇರಿ ಒಟ್ಟು 07 ಪ್ರಶಸ್ತಿಗಳನ್ನು ನೀಡಲಾಗುವುದು.
ಆಸಕ್ತರು ಅರ್ಜಿಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಶಿವಮೊಗ್ಗ ಈ ಕಚೇರಿಯಿಂದ ಪಡೆದು ಆಗಸ್ಟ್ 31 ರೊಳಗೆ ತ್ರಿಪ್ರತಿಯಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಬಿಎಸ್ಎನ್ಎಲ್ ಕಚೇರಿ ಹತ್ತಿರ, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ www.dwdsc.kar.nic.in ಪರಿಶೀಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
RBI ನಿಂದ ಮಹತ್ವದ ತೀರ್ಮಾನ: ಈಗ ನಿಮ್ಮ ಚೆಕ್ ಅನ್ನು ಶೀಘ್ರದಲ್ಲೇ ಬ್ಯಾಂಕಿನಿಂದ ಕ್ಲೀಯರ್…!
ಶಿವಮೊಗ್ಗ: ಆ.9, 10 ಮತ್ತು 11ರಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಶುಭ ದಿನ, ಗಳಿಗೆ, ನಕ್ಷೆತ್ರ ನೋಡಿ ಕುಮಾರಸ್ವಾಮಿ ಸಹೋದರನ ಆಸ್ತಿ ದಾಖಲೆ ಬಿಡುಗಡೆ: ಡಿಸಿಎಂ ಡಿ.ಕೆ ಶಿವಕುಮಾರ್