ಬೆಂಗಳೂರು: ನಗರದಲ್ಲಿ ಇಂದು ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದಿದೆ. ವಾಕಿಂಗ್ ಮಾಡುತ್ತಿದ್ದಂತ ಮಹಿಳೆಯೊಬ್ಬರಿಗೆ ಏಕಾಏಕಿ ಕಲ್ಲಿನಿಂದ ಅಪರಿಚಿತ ವ್ಯಕ್ತಿಯೊಬ್ಬ ಕಲ್ಲಿನಿಂದ ಜಜ್ಜಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರಿನ ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಸಹಕಾರ ನಗರದಲ್ಲಿ ಇಂದು ಈ ಘಟನೆ ನಡೆದಿದೆ. ವಾಕಿಂಗ್ ಮಾಡುತ್ತಿದ್ದಂತ ಸುನೀತಾ ಎಂಬುವರ ಮೇಲೆ ಏಕಾಏಕಿ ಅಪರಿಚಿತ ವ್ಯಕ್ತಿಯೊಬ್ಬ ಕಲ್ಲಿನಿಂದ ಜಜ್ಜಿದ್ದಾನೆ.
ತೀವ್ರ ರಕ್ತಸ್ರಾವದಿಂದ ನರಳುತ್ತಿದ್ದಂತ ಸುನೀತಾರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಅಲ್ಲದೇ ಮಹಿಳೆಗೆ ಜಜ್ಜಿದಂತ ಅಪರಿಚಿತ ವ್ಯಕ್ತಿಯನ್ನು ಹಿಡಿದು ಥಳಿಸಿದಂತ ಜನರು, ಕೊಡಿಗೆಹಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಅಂದಹಾಗೇ ಆರೋಪಿ ಮಾನಸಿಕ ಅಸ್ವಸ್ಥನಾಗಿದ್ದು, ಭಿಕ್ಷಾಟನೆ ಮಾಡುತ್ತಿದ್ದನು ಎಂಬುದಾಗಿ ತಿಳಿದು ಬಂದಿದೆ. ಕೊಡಿಗೇಹಳ್ಳಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.
RBI ನಿಂದ ಮಹತ್ವದ ತೀರ್ಮಾನ: ಈಗ ನಿಮ್ಮ ಚೆಕ್ ಅನ್ನು ಶೀಘ್ರದಲ್ಲೇ ಬ್ಯಾಂಕಿನಿಂದ ಕ್ಲೀಯರ್…!
RBI ನಿಂದ ಮಹತ್ವದ ತೀರ್ಮಾನ: ಈಗ ನಿಮ್ಮ ಚೆಕ್ ಅನ್ನು ಶೀಘ್ರದಲ್ಲೇ ಬ್ಯಾಂಕಿನಿಂದ ಕ್ಲೀಯರ್…!