ಚಿಕ್ಕಬಳ್ಳಾಪುರ: ದೇಶದಲ್ಲಿ ಜಲಕಂಟಕ, ಅಗ್ನಿಕಂಟಕ, ವಾಯು ಕಂಟಕಗಳು ಹೆಚ್ಚಾಗಲಿವೆ. ರಾಜ್ಯದಲ್ಲಿ ಈ ಬಾರಿ ಅತಿವೃಷ್ಟಿ ಸಾಧ್ಯತೆ ಇದೆ ಎಂದು ಕೋಡಿಮಠ ಶ್ರೀಗಳು ಹೇಳಿದ್ದಾರೆ.
ಅವರು ಕೆಲ ದಿನಗಳ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡಿ, ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ಆಪತ್ತು ಇರುವುದಿಲ್ಲ. ಶ್ರಾವಣದಲ್ಲಿ ನಾನು ಮತ್ತೊಮ್ಮೆ ಸ್ಫೋಟಕ ಭವಿಷ್ಯ ಹೇಳುತ್ತೇನೆ. ಕೇಂದ್ರ ಸರ್ಕಾರ ಹಾಗೂ ಮೋದಿ ಅವರ ಬಗ್ಗೆ ಶ್ರಾವಣದಲ್ಲಿ ಮಾತನಾಡುತ್ತೇನೆ ಎಂದು ತಿಳಿಸಿದ್ದರು,ಇನ್ನೂ ಗುರುಗಳು ಶಿಷ್ಯರಾಗುತ್ತಾರೆ, ಶಿಷ್ಯರು ಗುರುಗಳಾಗುತ್ತಾರೆ. ಹೆಣ್ಣು ಮಕ್ಕಳ ಪ್ರಾಬಲ್ಯ ಹೆಚ್ಚಾಗಲಿದೆ ಅಂತ ಅವರು ಹೇಳಿದರು.