ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-3ರ ಕೀ ಉತ್ತರವನ್ನು ಪ್ರಕಟಿಸಲಾಗಿದೆ.
ಈ ಕುರಿತಂತೆ ಮಂಡಳಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಎಸ್ ಎಸ್ ಎಲ್ ಸಿ ಪರೀಕ್ಷೆ-3 2024ರ ವಿಷಯವಾರು ಕೀ ಉತ್ತರಗಳನ್ನು ಮಂಡಳಿಯ ಜಾಲತಾಣ http://kseab.karnataka.gov.in ನಲ್ಲಿ ಪ್ರಕಟಿಸಲಾಗಿದೆ ಅಂತ ತಿಳಿಸಿದೆ.
ದಿನಾಂಕ 10-08-2024ರ ನಾಳೆಯವರೆಗೆ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರಿಂದ ಸಂಬಂಧ ಪಟ್ಟಂತ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಸಂಜೆ 5.30ರೊಳಗಾಗಿ ಆಕ್ಷೇಪಣೆಗಳನ್ನು ಮಂಡಳಿಯ ಚಾಲತಾಣದ ಮೂಲಕ ಸಲ್ಲಿಸುವಂತೆ ಸೂಚಿಸಿದೆ.
ಇನ್ನೂ ಮಂಡಳಿಯ ಜಾಲತಾಣಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳು ಆಗಸ್ಟ್.2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-3ರ ಕೀ ಉತ್ತರಗಳನ್ನು ಪರಿಶೀಲಿಸಬಹುದು. ಆಕ್ಷೇಪಣೆಯನ್ನು ಸಲ್ಲಿಸಬಹುದು ಅಂತ ಹೇಳಿದೆ.
BIG UPDATE: ಭೂಕುಸಿತ ಪೀಡಿತ ವಯನಾಡಲ್ಲಿ ನಿಗೂಢ ಶಬ್ದದೊಂದಿಗೆ ‘ಭೂಕಂಪ’ದ ಭೀತಿ | Wayanad Landslide