ನವದೆಹಲಿ: ಭಾರತ-ಬಾಂಗ್ಲಾದೇಶ ಗಡಿಯಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನ ಮೇಲ್ವಿಚಾರಣೆ ಮಾಡಲು ಕೇಂದ್ರವು ಶುಕ್ರವಾರ ಸಮಿತಿಯನ್ನ ರಚಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಭಾರತೀಯ ಪ್ರಜೆಗಳು, ಹಿಂದೂಗಳು ಮತ್ತು ಅಲ್ಪಸಂಖ್ಯಾತರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸಮಿತಿಯು ಬಾಂಗ್ಲಾದೇಶದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರುತ್ತದೆ ಎಂದು ಅವರು ಹೇಳಿದ್ದಾರೆ.
ಕೇಂದ್ರ ಸಚಿವರು, “ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಭಾರತ-ಬಾಂಗ್ಲಾದೇಶ ಗಡಿಯಲ್ಲಿ (IBB) ಪ್ರಸ್ತುತ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಮೋದಿ ಸರ್ಕಾರ ಸಮಿತಿಯನ್ನು ರಚಿಸಿದೆ. ಬಾಂಗ್ಲಾದೇಶದಲ್ಲಿ ವಾಸಿಸುವ ಭಾರತೀಯ ಪ್ರಜೆಗಳು, ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಸಮಿತಿಯು ಬಾಂಗ್ಲಾದೇಶದಲ್ಲಿನ ತಮ್ಮ ಸಹವರ್ತಿ ಅಧಿಕಾರಿಗಳೊಂದಿಗೆ ಸಂವಹನ ಮಾರ್ಗಗಳನ್ನು ನಿರ್ವಹಿಸುತ್ತದೆ” ಎಂದು ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.