ಬೆಂಗಳೂರು: ತುಂಗಭದ್ರಾ ಡ್ಯಾಂ ಕ್ರಸ್ಟರ್ ಗೇಟ್ ಕೊಚ್ಚಿ ಹೋದ ಹಿನ್ನಲೆಯಲ್ಲಿ ಆಗಸ್ಟ್.13ರಂದು ನಿಗದಿಯಾಗಿದ್ದಂತ ಬಾಗಿನ ಅರ್ಪಣೆ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಲಾಗಿದೆ. ಈ ಮೂಲಕ ರಾಜ್ಯ ಸರ್ಕಾರದಿಂದ ಮುಂಜಾಗ್ರತಾ ಕ್ರಮವಹಿಸಿದ್ದು, ಗೇಟ್ ರಿಪೇರಿ ಕೆಲಸ ಮಾಡಲಾಗುತ್ತಿದೆ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, ತುಂಗಭದ್ರಾ ಡ್ಯಾಂ ಕ್ರಸ್ಟರ್ ಗೇಟ್ ಕೊಚ್ಚಿ ಹೋದ ಕಾರಣ, ಆಗಸ್ಟ್.13ರಂದು ನಡೆಯಬೇಕಿದ್ದಂತ ಬಾಗಿನ ಅರ್ಪಣೆ ಕಾರ್ಯಕ್ರಮವನ್ನು ಮುಂದೂಡಿರುವುದಾಗಿ ತಿಳಿಸಿದೆ.
ತುಂಗಭದ್ರಾ ಡ್ಯಾಂ ಗೇಟ್ ಚೈನ್ ಕಟ್ ಪ್ರಕರಣ: ನದಿ ಪಾತ್ರದ ಜನರಿಗೆ ಕಟ್ಟೆಚ್ಚರಕ್ಕೆ ಡಿಸಿಎಂ ಸೂಚನ
ಬೆಂಗಳೂರು: ತುಂಗಭದ್ರಾ ಡ್ಯಾಂನ 19ನೇ ಗೇಟ್ ಚೈನ್ ಕಟ್ ಆಗಿತ್ತು. ಹೀಗಾಗಿ ಡ್ಯಾಂ ಸುತ್ತಮುತ್ತಲಿನ ಜನರಲ್ಲಿ ಆತಂಕಕ್ಕೂ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ನದಿ ಪಾತ್ರದ ಜನರು ಕಟ್ಟೆಚ್ಚರ ವಹಿಸೋದಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಸೂಚಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ತುಂಗಭದ್ರಾ ಡ್ಯಾಂ 19ನೇ ಗೇಟ್ ಚೈನ್ ಕಟ್ ಆದಂತ ಬಗ್ಗೆ ಮಾತನಾಡಿದಂತ ಅವರು, ಟಿಬಿ ಡ್ಯಾಂ ಚೈನ್ ಕಟ್ ಆಗಿರುವುದು ಗಮನಕ್ಕೆ ಬಂದಿದೆ. ಈ ಸಂಬಂಧ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಮಾಹಿತಿ ಪಡೆದಿದ್ದೇನೆ ಎಂದರು.
ತುಂಗಭದ್ರಾ ಡ್ಯಾಂ ಕ್ರಸ್ಟ್ ಚೈನ್ ಕಡಿತಗೊಂಡು ಈ ರೀತಿ ಅವಘಡ ಉಂಟಾಗಿದೆ ಎಂಬುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆಯೂ ಸೂಚಿಸಲಾಗಿದೆ. ಅಧಿಕಾರಿಗಳ ಜೊತೆಗೆ ಮಾಹಿತಿ ಪಡೆದು ದುರಸ್ತಿ ಕಾರ್ಯ ನಡೆಸಲಾಗುತ್ತದೆ ಎಂದರು.
BIG NEWS: ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಪೊಲೀಸರ ಗನ್ ಸದ್ದು: ರೌಡಿಶೀಟರ್ ಕಾಲಿಗೆ ಗುಂಡೇಟು
‘ಚಂದ್ರಗುತ್ತಿ ದೇವಸ್ಥಾನ’ದ ಸರ್ವಾಂಗೀಣ ವಿಕಾಸಕ್ಕೆ ಕ್ರಮ: ಸಚಿವ ಮಧು ಬಂಗಾರಪ್ಪ