ಬೆಂಗಳೂರು: ಕಂಡುಕೇಳರಿಯದ ಭೂಕುಸಿತದಿಂದ ನಲುಗಿರುವ ಕೇರಳದ ವಯನಾಡ್ ಜನತೆಯ ನೆರವಿಗೆ ರಾಜ್ಯದ ಕೈಗಾರಿಕೋದ್ಯಮಿಗಳು ಧಾವಿಸಿ, ಸಹಾಯಹಸ್ತ ಚಾಚಬೇಕು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮನವಿ ಮಾಡಿದ್ದಾರೆ.
ಈ ಬಗ್ಗೆ ಶನಿವಾರ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಈ ಸಂಬಂಧ ಯಾವುದೇ ಮಾಹಿತಿ/ಮಾರ್ಗದರ್ಶನ ಬೇಕಾದಲ್ಲಿ ಕೈಗಾರಿಕಾ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ ಅವರನ್ನು ದೂರವಾಣಿ ಸಂಖ್ಯೆ 080-22386796 ಅಥವಾ ಮಿಂಚಂಚೆ officeofdicommissioner@gmail.com ಮೂಲಕ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ವಯನಾಡ್ ದುರಂತದಲ್ಲಿ 412 ಮಂದಿ ಜೀವ ಕಳೆದುಕೊಂಡಿದ್ದು, ಇನ್ನೂ 138 ಜನ ಕಣ್ಮರೆಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಉದ್ಯಮಲೋಕವು ಮಾನವೀಯತೆಯನ್ನು ಎತ್ತಿ ಹಿಡಿಯಬೇಕಾಗಿದೆ ಎಂದು ಅವರು ಹೇಳಿದ್ದಾರೆ.
ಉದ್ಯಮಿಗಳು ಸಂತ್ರಸ್ತರ ಪುನರ್ವಸತಿ, ಅಗತ್ಯ ವಸ್ತುಗಳ ಪೂರೈಕೆ, ಮನೆಗಳ ಪುನರ್ನಿರ್ಮಾಣ, ಮೂಲಸೌಕರ್ಯ, ಜೀವನೋಪಾಯಕ್ಕೆ ನೆರವು, ವೈದ್ಯಕೀಯ ನೆರವು ಹೀಗೆ ಯಾವ ರೂಪದಲ್ಲಾದರೂ ಸಹಾಯ ಮಾಡಬಹುದು ಎಂದು ಸಚಿವರು ತಿಳಿಸಿದ್ದಾರೆ.
ನೆರೆಯ ರಾಜ್ಯವು ಈಗ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ತತ್ತರಿಸಿದೆ. ಆ ರಾಜ್ಯಕ್ಕೆ ನೆರವು ನೀಡಲು ಕರ್ನಾಟಕ ಸರಕಾರ ಬದ್ಧವಾಗಿದೆ ಎಂದು ಅವರು ವಿವರಿಸಿದ್ದಾರೆ.
‘ಚಂದ್ರಗುತ್ತಿ ದೇವಸ್ಥಾನ’ದ ಸರ್ವಾಂಗೀಣ ವಿಕಾಸಕ್ಕೆ ಕ್ರಮ: ಸಚಿವ ಮಧು ಬಂಗಾರಪ್ಪ
ಬೆಂಗಳೂರಿನ ಕಾಫಿ ಶಾಪ್ ವಾಶ್ ರೂಂನಲ್ಲಿ ಮೊಬೈಲ್ ಇಟ್ಟು ವೀಡಿಯೋ ರೆಕಾರ್ಡ್: ಆರೋಪಿ ಅರೆಸ್ಟ್
BREAKING: ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಕೊಚ್ಚಿ ಹೋದ ಹಿನ್ನಲೆ: ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ