ಬೆಂಗಳೂರು: ಕೇರಳದ ವಯನಾಡಿನಲ್ಲಿ ಉಂಟಾದಂತ ಭೂ ಕುಸಿತದ ನಂತ್ರ, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಕರ್ನಾಟಕದಲ್ಲಿ ಭೂ ಕುರಿತ ತಡೆಗೆ ಶೀಘ್ರವೇ ಹೊಸ ನೀತಿ ಜಾರಿಗೆ ತರಲು ನಿರ್ಧರಿಸಿದೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು, ಘಟ್ಟ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಭೂ ಕುಸಿತದ ಪರಿಣಾಮಗಳನ್ನು ತಗ್ಗಿಸುವ ಸಂಬಂಧ ಅಭಿವೃದ್ಧಿ ಕೇಂದ್ರಿತ ಚಟುವಟಿಕೆ ನಿಯಂತ್ರಿಸುವ ನೀತಿಯೊಂದನ್ನು ರೂಪಿಸಲಾಗುತ್ತಿದೆ, ಗುಡ್ಡಗಳನ್ನು ಕಡಿದು ನಿರ್ಮಾಣ ಚಟುವಟಿಕೆ ಕೈಗೊಳ್ಳುವುದು ಸೇರಿ ಹಲವು ಅವೈಜ್ಞಾನಿಕ ಅಭಿವೃದ್ಧಿಗೆ ನಿರ್ಬಂಧಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಗುಡ್ಡಗಳನ್ನು 90 ಡಿಗ್ರಿಯಲ್ಲಿ ಲಂಬವಾಗಿ ಕತ್ತರಿಸುವುದನ್ನು ತಡೆಯುವುದು, ಗುಡ್ಡದಿಂದ ನೀರು ಸರಾಗವಾಗಿ ಹರಿದುಹೋಗುವಂತೆ ವ್ಯವಸ್ಥೆ ಮಾಡುವುದು ಸೇರಿ ನಿರ್ಮಾಣ ಪರವಾನಗಿಯಲ್ಲಿ ಷರತ್ತು ವಿಧಿಸುವುದು, ಅನಧಿಕೃತ ನಿರ್ಮಾಣ ಚಟುವಟಿಕೆಗಳನ್ನು ನಿರ್ಬಂಧಿಸುವುದು ಒಳಗೊಂಡಂತೆ ಹಲವು ಉಪಕ್ರಮಗಳು ನೀತಿಯಲ್ಲಿ ಇರಲಿವೆ ಎಂದು ಅವರು ಹೇಳಿದ್ದಾರೆ.
ಘಟ್ಟ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಭೂ ಕುಸಿತದ ಪರಿಣಾಮಗಳನ್ನು ತಗ್ಗಿಸುವ ಸಂಬಂಧ ಅಭಿವೃದ್ಧಿ ಕೇಂದ್ರಿತ ಚಟುವಟಿಕೆ ನಿಯಂತ್ರಿಸುವ ನೀತಿಯೊಂದನ್ನು ರೂಪಿಸಲಾಗುತ್ತಿದೆ, ಗುಡ್ಡಗಳನ್ನು ಕಡಿದು ನಿರ್ಮಾಣ ಚಟುವಟಿಕೆ ಕೈಗೊಳ್ಳುವುದು ಸೇರಿ ಹಲವು ಅವೈಜ್ಞಾನಿಕ ಅಭಿವೃದ್ಧಿಗೆ ನಿರ್ಬಂಧಿಸಲು ಉದ್ದೇಶಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ… pic.twitter.com/9PXYxTDDQ0
— DIPR Karnataka (@KarnatakaVarthe) August 10, 2024
‘ಚಂದ್ರಗುತ್ತಿ ದೇವಸ್ಥಾನ’ದ ಸರ್ವಾಂಗೀಣ ವಿಕಾಸಕ್ಕೆ ಕ್ರಮ: ಸಚಿವ ಮಧು ಬಂಗಾರಪ್ಪ
ವಯನಾಡ್ ದುರಂತ: ಸಹಾಯಹಸ್ತ ನೀಡಲು ಉದ್ಯಮಿಗಳಿಗೆ ಸಚಿವ ಎಂ.ಬಿ ಪಾಟೀಲ್ ಮನವಿ
BREAKING: ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಕೊಚ್ಚಿ ಹೋದ ಹಿನ್ನಲೆ: ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ