ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬರ್ಬರ ಹತ್ಯೆಯಾಗಿದ್ದು, ಬೋರ್ ವೇಲ್ ಲಾರಿ ಚಾಲಕನನ್ನು ಕೊಲೆ ಮಾಡಲಾಗಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರದ ಎಸಿಇಎಸ್ ಲೇಔಟ್ ನಲ್ಲಿ ಕೊಲೆ ನಡೆದಿದ್ದು, ಮುಖಕ್ಕೆ ರಾಡ್ ನಿಂದ ಹೊಡೆದು ಲಾರಿ ಚಾಳಕ ಸುರೇಶ್ ನನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನಿನ್ನೆ ರಾತ್ರಿ 11.30 ರ ಸುಮಾರಿಗೆ ಕೊಲೆ ನಡೆದಿದೆ.
ಸ್ಥಳಕ್ಕೆ ಅಗ್ರಹಾರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.