ಶಿವಮೊಗ್ಗ : ಹಲವು ಕಳ್ಳತನ ಹಾಗೂ ಕೊಲೆ ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ಒಬ್ಬನನ್ನು ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ಆತ ಹಲ್ಲೆ ನಡೆಸಿದ್ದಾನೆ. ಇವಳೆ ಆತ್ಮ ರಕ್ಷಣೆಗಾಗಿ ಪೊಲೀಸರು ರೌಡಿಶೀಟರ್ ಮೇಲೆ ಗುಂಡು ಹಾರಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿನೋಬಾ ನಗರದಲ್ಲಿ ನಡೆದಿದೆ.
ಹೌದು ಬಂಧಿಸಲು ಹೋಗಿದ್ದಾಗ ಹಲ್ಲೆಗೆ ಯತ್ನಿಸಿದ್ದು, ಈ ವೇಳೆ ರೌಡಿಶೀಟರ್ ಗೆ ಗುಂಡು ಹಾರಿಸಲಾಗಿದೆ.ಆತ್ಮ ರಕ್ಷಣೆಗಾಗಿ ರೌಡಿಶೀಟರ್ ಭವಿತ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕಾಲಿಗೆ ವಿನೋಬನಗರ ಪಿಎಸ್ಐ ಸುನಿಲ್ ಗುಂಡು ಹೊಡೆದಿದ್ದಾರೆ.
ಆರೋಪಿ ಭವಿತ್ ಹಲವು ಕಳ್ಳತನ ಹಾಗೂ ಕೊಲೆ ಪ್ರಕರಣಗಳಲ್ಲಿ ಭವಿತ್ ಭಾಗಿಯಾಗಿದ್ದ ಎಂದು ಹೇಳಲಾಗುತ್ತಿದ್ದು, ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಭವಿತ್ ವಿರುದ್ಧ 7 ಪ್ರಕರಣಗಳು ದಾಖಲಾಗಿವೆ. ಹಲ್ಲೆಗೆ ಒಳಗದ ಕಾನ್ಸ್ಟೇಬಲ್ ಪ್ರಶಾಂತ್ ಗೆ ಸದ್ಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.