ದಕ್ಷಿಣ ಕನ್ನಡ: ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ಉಚಿತ ತರಬೇತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಉಜಿರೆಯ ರುಡ್ ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕರಾದಂತ ಅಬ್ರಾಹಂ ಜೇಮ್ಸ್ ಅವರು ಮಾಹಿತಿ ನೀಡಿದ್ದಾರೆ. ಧರ್ಮಸ್ಥಳದ ಸಮೀಪದ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ದಿನಾಂಕ 19-08-2024ರಿಂದ ದಿನಾಂಕ 17-09-2024ರವರೆಗೆ ಉಚಿತವಾಗಿ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ತರಬೇತಿಯನ್ನು ನೀಡಲಾಗುತ್ತಿದೆ ಎಂದಿದ್ದಾರೆ.
ಉಚಿತ ತರಬೇತಿಗಾಗಿ 18 ರಿಂದ 45 ವರ್ಷದ ವಯೋಮಾನದ ಸ್ವ ಉದ್ಯೋಗ ಆಕಾಂಕ್ಷಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತರಬೇತಿಯ ವೇಳೆಯಲ್ಲಿ ಉಚಿತ ಊಟ, ವಸತಿ ವ್ಯವಸ್ಥೆ ಇರುತ್ತದೆ ಎಂದು ಹೇಳಿದ್ದಾರೆ.
ಆಸಕ್ತರು ವಾಟ್ಸ್ ಆಪ್ ಮೂಲಕ ಅರ್ಜಿ ಸಲ್ಲಿಸುವುದಾದರೇ 6364561982ಗೆ ರಿಸ್ಯೂಮ್ ಕಳುಹಿಸಬಹುದು. ಅಲ್ಲದೇ www.rudsetujire.org ಗೆ ಭೇಟಿ ನೀಡಿ ಆನ್ ಲೈನ್ ಮೂಲಕವೂ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಯನ್ನು ಆಸಕ್ತರು 08256236404, 9591044014, 9448348569, 9980885900 ಹಾಗೂ 9902594791 ಸಂಖ್ಯೆಗೆ ಕರೆ ಮಾಡಿ ಪಡೆಯಬಹುದಾಗಿದೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
‘HMT’ ಅಧೀನದಲ್ಲಿರುವ ಭೂಮಿ ರಾಜ್ಯ ಸರ್ಕಾರಕ್ಕೆ ವಾಪಾಸ್ ಕೊಡುವ ಪ್ರಶ್ನೆಯೇ ಇಲ್ಲ: ಕೇಂದ್ರ ಸಚಿವ ‘HDK’ ಸ್ಪಷ್ಟನೆ
ಡೋಪಿಂಗ್ ನಿಯಮ ಉಲ್ಲಂಘನೆ: ಪ್ಯಾರಾಲಿಂಪಿಯನ್ ಪ್ರಮೋದ್ ಭಗತ್ ಗೆ 18 ತಿಂಗಳು ನಿಷೇಧ