ವಿಜಯನಗರ: ನಾನು ರೈತರ ಪರ: ಬೆಳೆಗಳಿಗೆ ತೊಂದರೆ ಆಗಲು ಬಿಡಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ತುಂಗಭದ್ರಾ ಡ್ಯಾಂ ಬಳಿಯಲ್ಲಿ ಕ್ರಸ್ಟ್ ಗೇಟ್ ಕೊಟ್ಟಿ ಹೋಗಿದ್ದನ್ನು ಪರಿಶೀಲಿಸಿದ ಬಳಿಕ ಹೇಳಿದ್ದಾರೆ.
ಅವರು ಇಂದು ತುಂಗಭದ್ರಾ ಜಲಾಶಯ ಗೇಟ್ ಮುರಿದಿರುವ ಸ್ಥಳವನ್ನು ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ತುಂಗಭದ್ರಾ ಜಲಾಶಯದ ನೀರನ್ನು ಗೇಟ್ ಗಳ ಮೂಲಕ ಬಿಡಲಾಗುತ್ತಿತ್ತು. ನೀರಿನ ಹರಿವನ್ನು ತಡೆಯುವಂತಹ ಗೇಟ್ ಗಳಲ್ಲಿ 19ನೇ ಗೇಟ್ ತುಂಡಾಗಿದೆ. ಜಲಾಶಯ ಗೇಟ್ ಗಳ ನಿರ್ಮಾಣ ತಜ್ಞ ಹಾಗೂ ಸುರಕ್ಷತೆ ತಜ್ಞ ಎಂಜಿನಿಯರ್ ಕನ್ನಯ್ಯ ನಾಯ್ಡು ಅವರ ಜೊತೆ ಚರ್ಚಿಸಿದ್ದೀನಿ. ಅವರಿಂದ ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗಿದೆ. ತುಂಗಭದ್ರಾ ಜಲಾಶಯದ ಸಂಪೂರ್ಣ ನಿರ್ವಹಣೆಯ ಜವಾಬ್ದಾರಿ ತುಂಗಭದ್ರಾ ಜಲಶಾಯ ಮಂಡಳಿಯದಾಗಿದ್ದು, ಭಾರತ ಸರ್ಕಾರ ನೇಮಿಸಿದ ಅಧ್ಯಕ್ಷರು, ಕೇಂದ್ರ ಜಲ ಆಯೋಗ, ಆಂಧ್ರ, ತೆಲಂಗಾಣ ಮತ್ತು ಕರ್ನಾಟಕದ ಸದಸ್ಯರು ಮಂಡಳಿಯಲ್ಲಿರುತ್ತಾರೆ. ಈ ಜಲಾಶಯದ ನಿರ್ಮಾಣ ದೇಶಕ್ಕೆ ಸ್ವಾತಂತ್ರ್ಯ ಬಂದ ಮರು ವರ್ಷವೇ ಕೈಗೆತ್ತಿಕೊಂಡು 1948 ರಲ್ಲಿ ಪ್ರಾರಂಭವಾಗಿ 1953 ರಲ್ಲಿ ಪೂರ್ಣಗೊಂಡು, 1954 ರಿಂದ ಜಲಾಶಯದಿಂದ ನಾಲೆಗಳಿಗೆ ನೀರು ಬಿಡಲು ಪ್ರಾರಂಭಿಸಲಾಯಿತು. ಸುಮಾರು 70 ವರ್ಷಗಳಷ್ಟು ಹಳೆಯದಾದ ಡ್ಯಾಂನಲ್ಲಿ ಇಲ್ಲಿನವರೆಗೆ ಯಾವುದೇ ಗೇಟ್ ನ ಚೈನ್ ತುಂಡಾಗಿರಲಿಲ್ಲ ಎಂದು ವಿವರಿಸಿದರು.
ತಜ್ಞರ ಸಲಹೆ ಮೇರೆಗೆ ದುರಸ್ತಿ ಕಾರ್ಯ
ಜಲಾಶಯದಲ್ಲಿ ಈ ವರ್ಷ 115 ಟಿಎಂಸಿ ನೀರಿದ್ದು, ಈಗಾಗಲೇ 25 ಟಿಎಂಸಿ ನೀರನ್ನು ರೈತರ ಜಮೀನಿಗೆ ಬಿಡಲಾಗಿದೆ. ರೈತರ ಮೊದಲನೇ ಬೆಳೆಗೆ 90 ಟಿಎಂಸಿ ನೀರು ಬೇಕಾಗಿದ್ದು, ಈ ಪ್ರಮಾಣದ ನೀರು ಜಲಾಶಯದಲ್ಲಿ ಲಭ್ಯವಿದೆ. ಆದರೆ ಜಲಾಶಯದ 19 ನೇ ಗೇಟ್ ತುಂಡಾಗಿರುವುದರಿಂದ 35 ಸಾವಿರ ಕ್ಯೂಸೆಕ್ ನೀರು ಹೋಗುತ್ತಿದೆ. ಜಲಾಶಯದ ನೀರನ್ನು ಬಿಡದೇ ದುರಸ್ತಿ ಕಾರ್ಯವನ್ನು ಕೈಗೊಳ್ಳಲು ಸಾಧ್ಯವಿಲ್ಲ. ನೀರಿನ ಮಟ್ಟವನ್ನು ಕಡಿಮೆ ಮಾಡಲಾಗುತ್ತಿದ್ದು, ನಂತರವೂ 64 ಟಿಎಂಸಿ ನೀರು ಉಳಿಯುತ್ತದೆ. ಗೇಟ್ ನ ದುರಸ್ತಿ ಕಾರ್ಯಕ್ಕೆ ಕನಿಷ್ಟ 4 ರಿಂದ 5 ದಿನಗಳು ಬೇಕಾಗುತ್ತವೆ. ಹಿಂದುಸ್ಥಾನ್ ಇಂಜಿನಿಯರಿಂಗ್ಸ್ ಹಾಗೂ ನಾರಾಯಣ ಇಂಜಿನಿಯರಿಂಗ್ಸ್ ಅವರಿಗೆ ಹೊಸ ಗೇಟ್ ತಯಾರಿ ಹೊಣೆ ವಹಿಸಲಾಗಿದ್ದು, ಕನ್ನಯ್ಯ ನಾಯ್ಡು ಅವರ ಸಲಹೆ ಮೇರೆಗೆ ದುರಸ್ತಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದರು.
ನಮ್ಮ ರೈತರು ಬೇರೆಯಲ್ಲ, ನಿಮ್ಮ ರಾಜ್ಯದ ರೈತರು ಬೇರೆಯಲ್ಲ. ರೈತರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಥಳದಲ್ಲಿ ಉಪಸ್ಥಿತರಿದ್ದ ಆಂಧ್ರ, ತೆಲಂಗಾಣ ರಾಜ್ಯಗಳ ಕೃಷಿ ಸಚಿವರಿಗೆ ಸಿಎಂ ಭರವಸೆ ನೀಡಿದರು.
‘ಮಕ್ಕಳ ಪೋಷಕ’ರಿಗೆ ಗುಡ್ ನ್ಯೂಸ್: ಮುಂದಿನ ವರ್ಷದ ವೇಳೆಗೆ ‘500 ಕರ್ನಾಟಕ ಪಬ್ಲಿಕ್ ಶಾಲೆ’ಗಳು ಆರಂಭ
BREAKING: ಶಿರೂರು ಬಳಿಯ ಗುಡ್ಡ ಕುಸಿತ ಕೇಸ್: ಗಂಗಾವಳಿ ನದಿಯಲ್ಲಿ ಲಾರಿಯ ಹಲವು ಬಿಡಿಭಾಗಗಳು ಪತ್ತೆ
Good News : ‘ವಾಟ್ಸಾಪ್’ ಮೂಲಕವೂ ‘ಆಧಾರ್, ಪ್ಯಾನ್ ಕಾರ್ಡ್’ ಡೌನ್ಲೋಡ್ ಮಾಡ್ಬೋದು! ಹೇಗೆ ಗೊತ್ತಾ?