ಶಿವಮೊಗ್ಗ : ರಾಜ್ಯದಲ್ಲಿ ಇತ್ತೀಚಿಗೆ ರಸ್ತೆ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ವಾಹನ ಚಲಾಯಿಸುವಾಗ ಎಷ್ಟೇ ಕಟ್ಟೇಚ್ಚರ ವಹಿಸಿದರು ಕಡಿಮೆಯೇ, ಅದರಂತೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಅಗಸರಕೋಣೆ ಬಳಿ ಪಿಕಪ್ ವಾಹನ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಹೌದು ಪಿಕಪ್ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅಗಸರಕೋಣೆ ಬಳಿ ನಡೆದಿದೆ.ಅಗಸರಕೋಣೆ ನಿವಾಸಿ ಶರತ್ ಹಾಗೂ ಕೇರಳದ ಮೂಲದ ವ್ಯಕ್ತಿ ಮೃತ ರ್ದುದೈವಿಗಳು ಎಂದು ತಿಳಿದುಬಂದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಈ ಕುರಿತು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.