ಬೆಂಗಳೂರು : ಭೋವಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆಸಿರುವ ಪ್ರಕರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿ ಅಧಿಕಾರಿಗಳು ಬೆಂಗಳೂರಿನ ವಿಶ್ವೇಶ್ವರಯ್ಯ ಟವರ್ ನಲ್ಲಿರುವ ಭೋವಿ ನಿಗಮದ ಕಚೇರಿಯ ಮೇಲೆ ದಾಳಿ ಮಾಡಿದ್ದು, ಹಲವು ಮಹತ್ವದ ದಾಖಲೆ ಹಾಗೂ ಕಡತಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಇಂದು ಭೋವಿ ಅಭಿವೃದ್ಧಿ ನಿಗಮದ ಕಚೇರಿಯ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ಮಾಡಿದ್ದು, ಸತತ ಮೂರು ಗಂಟೆಗಳ ಕಾಲ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕೆಲ ಮಹತ್ವದ ಕಡತಗಳನ್ನು ವಶಕ್ಕೆ6 ಪಡೆದುಕೊಂಡು ಅಧಿಕಾರಿಗಳು ತೆರಳಿದ್ದಾರೆ ಎಂದು ತಿಳಿದುಬಂದಿದೆ.
ವಿಶ್ವೇಶ್ವರಯ್ಯ ಟವರ್ ನಲ್ಲಿರುವ ಭೋವಿ ಅಭಿವೃದ್ಧಿ ನಿಗಮದ ಕಚೇರಿಯ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಳೆದ 2021-22 ನೇ ಸಾಲಿನಲ್ಲಿ ಉದ್ಯಮಿಗಳಿಗೆ ಸಾಲ ನೀಡುವಾಗ ಅಕ್ರಮ ನಡೆದಿದೆ. ಲಕ್ಷಾಂತರ ರೂಪಾಯಿ ಸಾಲ ಕೊಡಿಸುವುದಾಗಿ ಸಾರ್ವಜನಿಕ ದಾಖಲೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಹಾಗೂ 10 ಕೋಟಿಗೂ ಹೆಚ್ಚು ಹಣ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವ ಆರೋಪ ಕೇಳಿ ಬಂದಿತ್ತು.ಈ ವೇಳೆ ನಿಗಮದ ಅಧ್ಯಕ್ಷ ಸುಬ್ಬಪ್ಪ ಹಲವು ಕಡತಗಳನ್ನು ಕಳ್ಳತನ ಮಾಡಿದ್ದ.
ಅಭಿವೃದ್ಧಿ ನಿಗಮದ ಲೆಕ್ಕಪತ್ರ, ಕಡತ, ನಗದು ಪುಸ್ತಕಗಳನ್ನು, ಅಲ್ಲದೆ ಯೋಜನಾ ಕಡತಗಳು, ಬ್ಯಾಂಕ್ ಚೆಕ್ ಸೇರಿದಂತೆ 200ಕ್ಕೂ ಹೆಚ್ಚು ಕಡತಗಳನ್ನು ಅಧ್ಯಕ್ಷ ಸುಬ್ಬಪ್ಪ ಕಳ್ಳತನ ಮಾಡಿದ್ದ. ಈ ಕುರಿತು ಬೆಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ಕಲಬುರ್ಗಿ ಜಿಲ್ಲೆಯಲ್ಲಿ ದೂರು ದಾಖಲಾಗಿತ್ತು. ಕೆಲ ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು. ಅದಾದ ಬಳಿಕ ಸಿಐಡಿ ಅಧಿಕಾರಿಗಳು ಭೋವಿ ನಿಗಮದ ಅಧ್ಯಕ್ಷ ಸುಬ್ಬಪ್ಪನನ್ನು ಬಂಧಿಸಿದ್ದರು.