ಬೆಂಗಳೂರು : ಆಗಸ್ಟ್ 15 ರ ನಾಳೆ ಸ್ವಾತಂತ್ರ್ಯ ಮಹತ್ಸೋವದ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.
ದಿನಾಂಕ: 15/08/2024 ರಂದು ಬೆಳಗ್ಗೆ 09-00 ಗಂಟೆಗೆ ಕಬ್ಬನ್ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಸ್ವಾತಂತ್ಯೋತ್ಸವ ದಿನಾಚರಣೆ-2024 ರ ಅಂಗವಾಗಿ ವಿಶೇಷ ಕವಾಯತು ನಡೆಯಲಿದ್ದು, ಕರ್ನಾಟಕ ರಾಜ್ಯದ ಮಾನ್ಯ ಮುಖ್ಯ ಮಂತ್ರಿಗಳು ಧ್ವಜಾರೋಹಣ ಮಾಡಿ ಗೌರವವಂದನೆ ಸ್ವೀಕರಿಸಲಿದ್ದಾರೆ.
ಇದರ ಅಂಗವಾಗಿ ಬೆಂಗಳೂರು ನಗರ ಸಂಚಾರ ಪೊಲೀಸರು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದ ಒಳಗಡೆ ಮತ್ತು ಸುತ್ತ-ಮುತ್ತಲು ಈ ಕೆಳಕಂಡಂತೆ ಸಂಚಾರ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದೆ.
- ಕಾರ್ ಪಾಸ್ಗಳನ್ನು ಹೊಂದಿರುವ ಎಲ್ಲಾ ಆಹ್ವಾನಿತರು ಅವರುಗಳ ಪಾಸ್ಗಳಲ್ಲಿ ನಿಗದಿಪಡಿಸಿದ ಗೇಟ್ಗಳಲ್ಲಿ ಇಳಿದು ಕೊಳ್ಳುವುದು ಹಾಗೂ ಪಾಸ್ನಲ್ಲಿ ನಿಗದಿಪಡಿಸಿರುವ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡುವಂತೆ ಕೋರಲಾಗಿದೆ.
- ತುರ್ತು ಸೇವಾ ವಾಹನಗಳಾದ ಅಂಬುಲೆನ್ಸ್, ಅಗ್ನಿಶಾಮಕ ದಳದ ವಾಹನಗಳು, ನೀರಿನ ಟ್ಯಾಂಕರ್, ಕೆ.ಎಸ್.ಆರ್.ಪಿ., ಕ್ಯೂ.ಆರ್.ಟಿ, ಬಿ.ಬಿ.ಎಂ.ಪಿ. ಹಾಗೂ ಪಿ.ಡಬ್ಲ್ಯೂಡಿ ವಾಹನಗಳು ಪ್ರವೇಶ ದ್ವಾರ-2 ರ ಮುಖಾಂತರ ಪರೇಡ್ ಮೈದಾನದ ಒಳಗೆ ಪ್ರವೇಶಿಸಿ ನಂತರ ಪೋರ್ಟ್ ವಾಲ್ ಹಿಂಭಾಗದಲ್ಲಿ (ದಕ್ಷಿಣದ ಕಡೆಗೆ) ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
- ಕಾರ್ಯಕ್ರಮಕ್ಕೆ ಬರುವ ಎಲ್ಲಾ ಮಾಧ್ಯಮದವರ ವಾಹನಗಳು ಪ್ರವೇಶ ದ್ವಾರ-4 ರ ಮೂಲಕ ಒಳ ಪ್ರವೇಶಿಸಿ ಮೈದಾನದ ಪೂರ್ವ ಭಾಗದಲ್ಲಿ ನಿಗಧಿತ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಬಹುದಾಗಿದೆ.
ವಾಹನ ನಿಲುಗಡೆ ನಿಷಿದ್ದ ರಸ್ತೆಗಳು:
- ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದವರೆಗೆ
- ಕಬ್ಬನ್ ರಸ್ತೆ, ಸಿ.ಟಿ.ಓ. ವೃತ್ತದಿಂದ ಕೆ.ಆರ್.ರಸ್ತೆ & ಕಬ್ಬನ್ರಸ್ತೆ ಜಂಕ್ಷನ್ ವರೆಗೆ.
- ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ಲೀನ್ಸ್ ವೃತ್ತದವರೆಗೆ.
ಬೆಂಗಳೂರು ಸಂಚಾರ ಪೊಲೀಸರಿಂದ ಸಾರ್ವಜನಿಕ ಬಂಧುಗಳಲ್ಲಿ ವಿಶೇಷ ಮನವಿ.
- ಮಾಣಿಕ್ ಷಾ ಪರೇಡ್ ಮೈದಾನ ಹಾಗೂ ಸುತ್ತಮುತ್ತ ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕೊರತೆ ಇರುವುದರಿಂದ ಹಾಗೂ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಾರ್ವಜನಿಕರು, ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತು ಮೆಟ್ರೋ ಸೇವೆಯನ್ನು ಬಳಸಲು ಕೋರಲಾಗಿದೆ.
- ಯಾವುದೇ ಸಹಾಯಕ್ಕಾಗಿ ಪೊಲೀಸರು ಸದಾ ನಿಮ್ಮೊಂದಿಗಿರುತ್ತಾರೆ. ದಯವಿಟ್ಟು ಸ್ಥಳದಲ್ಲಿರುವ ಪೊಲೀಸರನ್ನು ಸಂಪರ್ಕಿಸಿ ಅಥವಾ 112 ಗೆ ಕರೆ ಮಾಡಿ.