ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ರನ್ನು ಇಂದು ನಟ ಅಭಿಷೇಕ್ ಅಂಬರೀಶ್ ಭೇಟಿಯಾಗಲಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಬೆಂಗಳೂರಿನ ಪರಪ್ಪನಅಗ್ರಹಾರ ಜೈಲು ಸೇರಿ ದರ್ಶನ್ ಎರಡು ತಿಂಗಳಾಗಿದೆ. ಈ ನಡುವೆ ನಟ ಅಭಿಷೇಕ್ ಅಂಬರೀಶ್ ಇದೇ ಮೊದಲ ಬಾರಿಗೆ ದರ್ಶನ್ ಭೇಟಿಗೆ ಬರಲಿದ್ದಾರೆ. ಅಭಿಷೇಕ್ ಅಂಬರೀಶ್ ಗೆ ನಟ ಚಿಕ್ಕಣ್ಣ ಸಾಥ್ ನೀಡಲಿದ್ದಾರೆ.
ಇನ್ನು ಕನ್ನಡ ಚಿತ್ರರಂಗದ ಒಳತಿಗಾಗಿ ಇಂದು ಹೋಮ, ಹವನ ನಡೆಸಲಾಗುತ್ತಿದ್ದು, ಸ್ಯಾಂಡಲ್ ವುಡ್ ಹಿರಿಯ ನಟ, ನಟಿಯರು, ನಿರ್ದೇಶಕರು, ನಿರ್ಮಾಪಕರು, ಕಲಾವಿದರು ಭಾಗಿಯಾಗಿದ್ದಾರೆ.