ಮೈಸೂರು:ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ ಅ.3 ರಿಂದ ಅ.12 ರ ವರೆಗೆ ಜರುಗಲಿದ್ದು ಟಿಕೆಟ್ ಗಾಗಿ ಇನ್ನು ಮುಂದೆ ಕ್ಯೂ ನಿಲ್ಲಬೇಕಿಲ್ಲ. ಮೈಸೂರು ಅರಮನೆ ನೋಡಲು ಬರುವ ಪ್ರವಾಸಿಗರಿಗೆ ಗುಡ್ ನ್ಯೂಸ್ ಇದ್ದು EDCS ಮೊಬೈಲ್ ಒನ್ ಯೋಜನೆಯ ಮೂಲಕ ಟಿಕೆಟ್ ಖರೀದಿಗೆ ಅವಕಾಶ ಮಾಡಿಕೊಡಲಾಗುತ್ತಿದೆ.
ಇದರಿಂದ ಕ್ಯೂ ನಿಂತು ಟಿಕೆಟ್ ಪಡೆಯುವ ಸಮಯ ಉಳಿಯಲಿದೆ.
ಪ್ರವಾಸಿಗರು ಸರ್ಕಾರದ ಇಡಿಸಿಎಸ್ ಮೊಬೈಲ್ ಒನ್ ಯೋಜನೆಯ ಮೂಲಕ ಮೊಬೈಲ್ನಲ್ಲೆ ಅರಮನೆ ವೀಕ್ಷಣೆಗೆ ಟಿಕೆಟ್ ಖರೀದಿ ಮಾಡಬಹುದು. ವಾಟ್ಸಾಪ್ನಲ್ಲಿ 8884160088 ನಂಬರ್ಗೆ ಎಜಿ ಎಂದು ಟೈಪ್ ಮಾಡಿ ಸಂದೇಶ ಕಳಿಸುವ ಮೂಲಕ ಟಿಕೆಟ್ ಪಡೆಯಬಹುದು. ವಾಟ್ಸಾಪ್ನಲ್ಲಿ ಖರೀದಿಸಿದ ಟಿಕೆಟ್ 5 ದಿನದವರೆಗೆ ಮಾನ್ಯತೆ ಇರುತ್ತದೆ.