ಬೆಂಗಳೂರು : ಸ್ವಾತಂತ್ರ್ಯ ಮಹತೋತ್ಸವದ ಹಿನ್ನೆಲೆಯಲ್ಲಿ ಆಗಸ್ಟ್ 15 ರ ನಾಳೆ ಕಾರ್ಮಿಕರಿಗೆ ಕಡ್ಡಾಯವಾಗಿ ವೇತನ ಸಹಿತ ರಜೆ ನೀಡಲು ಸೂಚನೆ ನೀಡಲಾಗಿದೆ.
ಕರ್ನಾಟಕ ಕೈಗಾರಿಕಾ ಸಂಸ್ಥೆಗಳ (ರಾಷ್ಟ್ರೀಯ ಹಬ್ಬ ಮತ್ತು ರಜಾ ದಿನಗಳ) ಕಾಯ್ದೆ 1963 ರ ಕಲಂ 3 ಹಾಗೂ ಕರ್ನಾಟಕ ನಿಯಮಗಳು 1964 ರ ನಿಯಮ 9 ರ ಮೇರೆಗೆ ಕೊಡಗು ಜಿಲ್ಲೆಯಾದ್ಯಂತ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು, ಹೋಟೆಲ್, ರೆಸ್ಟೋರೆಂಟ್ಗಳು, ರೆಸಾರ್ಟ್ಗಳು, ಕಾರ್ಖಾನೆಗಳು, ಕೈಗಾರಿಕಾ ಸಂಸ್ಥೆಗಳು, ಪ್ಲಾಂಟೇಷನ್ಗಳು ಹಾಗೂ ಇತರೆ ಸಂಸ್ಥೆಗಳು ಆಗಸ್ಟ್, 15 ರಂದು ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಕಡ್ಡಾಯವಾಗಿ ತಮ್ಮಲ್ಲಿ ಕೆಲಸ ಮಾಡುವ ನೌಕರರಿಗೆ ವೇತನ ಸಹಿತ ರಜೆ ನೀಡಲು ಸೂಚಿಸಿದೆ.
ತಪ್ಪಿದಲ್ಲಿ ಕಾಯ್ದೆ ಮತ್ತು ನಿಯಮಗಳ ಉಲ್ಲಂಘನೆಗಾಗಿ ಸಂಬಂಧಿಸಿದವರ ವಿರುದ್ಧ ಕಾಯ್ದೆ ಮತ್ತು ನಿಯಮಗಳಡಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು.