ಬೆಂಗಳೂರು : ಹೊಸ ಬಿಪಿಎಲ್ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದರಿಗೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸೆಪ್ಟೆಂಬರ್ ನಲ್ಲಿ ಹೊಸ ಬಿಪಿಎಲ್ ಕಾರ್ಡ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ಬಿಪಿಎಲ್ ಕಾರ್ಡುಗಳಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಬರುತ್ತಿದೆ, ತಮ್ಮ ಇಲಾಖೆಯು ಅರ್ಜಿಗಳ ಪರಿಷ್ಕರಣೆ ನಡೆಸಿ ಅರ್ಹರಿಗೆ ಮಾತ್ರ ಕಾರ್ಡುಗಳನ್ನು ವಿತರಿಸಲಾಗುತ್ತದೆ ಎಂದು ಹೇಳಿದ್ದಾರೆ. ಈ ಮೂಲಕ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಕಾಯುತ್ತಿರುವವರಿಗೆ ಸಿಹಿಸುದ್ದಿ ನೀಡಿದ್ದಾರೆ.
ಕುಟುಂಬದ ಸದಸ್ಯರು ಬೇರೆ ಬೇರೆ ಮನೆಗಳಲ್ಲಿ ವಾಸ ಮಾಡುತ್ತಿದ್ದು, ಅಂತಹವರು ಬಿಎಪಿಎಲ್ ಕಾರ್ಡುಗಳಿಗೆ ಅರ್ಜಿ ಸಲ್ಲಿಸಿದ್ದರೆ ಅವರು ಪ್ರತ್ಯೇಕವಾಗಿ ವಾಸ ಮಾಡುತ್ತಿರುವ ಬಗ್ಗೆ ಸಂಬಂಧಪಟ್ಟ ತಹಸೀಲ್ದಾರ್ ಆಹಾರ ಮತ್ತು ನಾಗರಿಕ ಪೂರೈಕೆಗೆ ಇಲಾಖೆಗೆ ದೃಢೀಕರಣ ನೀಡಲು ಸೂಚನೆ ನೀಡಲಾಗಿದೆ. ಜೊತೆಗೆ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.