ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲು ಸೇರಿರುವಂತ ಅವರಿಗೆ ಈಗ ಮತ್ತೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿದೆ.
ಈ ಕುರಿತಂತೆ ಇಂದು ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯವು, ನಟ ದರ್ಶನ್ ಅಂಡ್ ಗ್ಯಾಂಗ್ ಗೆ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್.28ರವರೆಗೆ ವಿಸ್ತರಿಸಿ ಆದೇಶಿಸಿದೆ.
ಅಂದಹಾಗೇ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳು ರೇಣುಕಾಸ್ವಾಮಿ ಮರ್ಡರ್ ಕೇಸಲ್ಲಿ ಜೈಲು ಪಾಲಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವಂತ ನಟ ದರ್ಶನ್ ಜೈಲೂಟ ಬೇಡ, ಮನೆಯೂಟ ಬೇಕು ಅಂತ ಅರ್ಜಿ ಸಲ್ಲಿಸಿದ್ದರೂ ಕೋರ್ಟ್ ಅವಕಾಶ ನೀಡಿರಲಿಲ್ಲ. ಜೈಲು ಅಧಿಕಾರಿಗಳು ನೋ ಎಂದಿದ್ದರು.
ರಾಜ್ಯದ ರೈತರಿಗೆ ಗುಡ್ ನ್ಯೂಸ್ ; ಸೆಪ್ಟೆಂಬರ್ ನಿಂದ ‘ಪೋಡಿ’ ಅಭಿಯಾನಕ್ಕೆ ಚಾಲನೆ
ರಾಜ್ಯದ ರೈತರೇ ಗಮನಿಸಿ : ‘PM KISAN’ ಹಣ ಜಮಾ ಆಗಲು ಕೂಡಲೇ `e-KYC’ ಮಾಡಿಸಿಕೊಳ್ಳಿ!