ಬೆಂಗಳೂರು: ರಾಜ್ಯದ ರೈತರಿಗೆ ನೆಮ್ಮದಿಯ ಸುದ್ದಿ ಎನ್ನುವಂತೆ ಒತ್ತುವರಿ ತೆರವು ಬಗ್ಗೆ ರೈತರು ಆತಂಕ ಪಡುವ ಅಗತ್ಯವಿಲ್ಲ ಎಂಬುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟ ಪಡಿಸಿದ್ದಾರೆ.
ಅರಣ್ಯಭೂಮಿ ಒತ್ತುವರಿ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದ್ದರೂ ತೆರವಾಗಿರದ ಒತ್ತುವರಿಗಳನ್ನು ಮಾತ್ರ ತೆರವು ಮಾಡಲು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಅರಣ್ಯಭೂಮಿ ಒತ್ತುವರಿ ಪ್ರಕರಣಗಳಲ್ಲಿ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದ್ದರೂ ತೆರವಾಗಿರದ ಒತ್ತುವರಿಗಳನ್ನು ಮಾತ್ರ ತೆರವು ಮಾಡಲು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.#ಭೂಒತ್ತುವರಿ@CMofKarnataka @siddaramaiah @DKShivakumar… pic.twitter.com/Bbb0uVMVfI
— DIPR Karnataka (@KarnatakaVarthe) August 14, 2024
ರಾಜ್ಯ ಸರ್ಕಾರ 2015ರಲ್ಲಿ ಒಂದು ಆದೇಶ ಮಾಡಿದ್ದು, ಜೀವನೋಪಾಯಕ್ಕಾಗಿ ಅರಣ್ಯ ಭೂಮಿ ಒತ್ತುವರಿ ಮಾಡಿರುವವರ ಪಟ್ಟಾಭೂಮಿ ಮತ್ತು ಒತ್ತುವರಿ ಭೂಮಿ ಎರಡೂ ಸೇರಿ 3 ಎಕರೆ ಮೀರದಿದ್ದರೆ ಅಂತಹ ಒತ್ತುವರಿ ತೆರವು ಮಾಡುವುದಿಲ್ಲ ಎಂದು ಹೇಳಿದೆ. ಸರ್ಕಾರ ಈಗಲೂ ಅದಕ್ಕೆ ಬದ್ಧವಾಗಿದೆ ಎಂದಿದ್ದಾರೆ.
ಅದೇ ರೀತಿ ಅರಣ್ಯ ಹಕ್ಕು ಕಾಯಿದೆ ಅಡಿ ಈಗಾಗಲೇ ಅರ್ಜಿ ಸಲ್ಲಿಸಿರುವರ ಯಾವುದೇ ಮನೆ, ಜಮೀನು ತೆರವು ಮಾಡುವುದಿಲ್ಲ. ಆದರೆ 2015ರ ನಂತರದ ಹೊಸ ಒತ್ತುವರಿ ವಿಚಾರದಲ್ಲಿ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಗ್ಯಾರಂಟಿ ಹಾಲಿ ಸ್ವರೂಪದಲ್ಲೇ ಮುಂದುವರಿಯುತ್ತದೆ: ಸಚಿವ ಈಶ್ವರ ಖಂಡ್ರೆ
BREAKING: ಟೀಂ ಇಂಡಿಯಾ ಬೌಲಿಂಗ್ ಕೋಚ್ ಆಗಿ ಮಾರ್ನೆ ಮಾರ್ಕೆಲ್ ನೇಮಕ: ವರದಿ | Morne Morkel