ಬೆಂಗಳೂರು: ರಾಜ್ಯಾಧ್ಯಂತ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದಂತ ಪ್ರಯಾಣಿಕರಿಗೆ ತನಿಖಾಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಜುಲೈ.2024ರ ತಿಂಗಳಲ್ಲಿ ಟಿಕೇಟ್ ಇಲ್ಲದೆ ಪ್ರಯಾಣಿಸಿದ 3695 ಪ್ರಯಾಣಿಕರಿಗೆ ದಂಡವನ್ನು ವಸೂಲಿ ಮಾಡಿದ್ದಾರೆ.
ಈ ಕುರಿತಂತೆ ಕೆ ಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಜುಲೈ -2024 ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 44879 ವಾಹನಗಳನ್ನು ತನಿಖೆಗೊಳಪಡಿಸಿ 3593 ಪ್ರಕರಣಗಳನ್ನು ಪತ್ತೆಹಚ್ಚಲಾಗಿದೆ ಎಂದಿದೆ.
ತನಿಖೆಯಲ್ಲಿ ಪತ್ತೆಯಾದಂತ 3695 ಟಿಕೇಟ್ ರಹಿತ ಪ್ರಯಾಣಿಕರಿಂದ 6,03,642/- ರೂ ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಿರುತ್ತಾರೆ. ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 83,747/- ರೂ ಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ, ಹಾಗೂ ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ ಎಂದು ಹೇಳಿದೆ.
ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ, ನಿಗಮವು ಈ ಮೂಲಕ ಪ್ರಯಾಣಿಕರಲ್ಲಿ ಕೋರಿದೆ.
BREAKING: ಬೆಂಗಳೂರಿನ ವಿಧಾನಸೌಧದ ಸಮೀಪ ಎಲೆಕ್ಟ್ರಿಕ್ ಬೈಕ್ ಗೆ ಬೆಂಕಿ: ಹೊತ್ತಿ ಉರಿದ ವಾಹನ
‘ಆದಾಯ ತೆರಿಗೆ ಪಾವತಿ’ಯಿಂದ ಯುಐಡಿಎಐಗೆ ವಿನಾಯಿತಿ ನೀಡಿದ ‘ಹಣಕಾಸು ಸಚಿವಾಲಯ’ | Income Tax
ರಾಜ್ಯದ ರೈತರೇ ಗಮನಿಸಿ : ‘PM KISAN’ ಹಣ ಜಮಾ ಆಗಲು ಕೂಡಲೇ `e-KYC’ ಮಾಡಿಸಿಕೊಳ್ಳಿ!