ಬೆಂಗಳೂರು: ನಗರದ ಜೆಪಿ ನಗರದಲ್ಲಿ ರಾಮೇಶ್ವರಂ ಕೆಫೆ ಮಾದರಿಯಲ್ಲೇ ಅನುಮಾನಾಸ್ಪದವಾಗಿ ನಿಗೂಢ ರೀತಿಯಲ್ಲಿ ಸ್ಪೋಟವೊಂದು ಆಗಿದ್ದಾಗಿ ತಿಳಿದು ಬಂದಿತ್ತು. ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದರು. ಇವರಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರಿನ ಜೆಪಿ ನಗರದ ಮನೆಯೊಂದರಲ್ಲಿ ಅಡುಗೆ ಮಾಡಲು ಇರಿಸಲಾಗಿದ್ದಂತ ಕುಕ್ಕರ್ ನಿಗೂಢ ರೀತಿಯಲ್ಲಿ ಸ್ಪೋಟಗೊಂಡಿತ್ತು. ಆ ಬಳಿಕ ಕುಕ್ಕರ್ ಬಲ್ಬಿಗೆ ತಾಗಿದ ಪರಿಣಾಮ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಇಡೀ ಮನೆಗೆ ಬೆಂಕಿ ಆವರಿಸಿತ್ತು.
ಈ ದುರ್ಘಟನೆಯಲ್ಲಿ ಮನೆಯಲ್ಲಿದ್ದಂತ ಸಮೀರ್ ಮತ್ತು ಮೋಸಿನ್ ಎಂಬುವರು ಗಾಯಗೊಂಡಿದ್ದರು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಮೋಸಿನ್ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಅಂದಹಾಗೇ ಸೋಮವಾರ ಬೆಳಿಗ್ಗೆ 10 ಗಂಟೆಗೆ ಈ ಸ್ಪೋಟ ಸಂಭವಿಸಿತ್ತು. ಗಾಯಗೊಂಡಿದ್ದಂತ ಇಬ್ಬರು ಉತ್ತರ ಪ್ರದೇಶದ ಮೂಲದವರು ಎನ್ನಲಾಗಿತ್ತು. ಈ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ರಾಜ್ಯದ ರೈತರೇ ಗಮನಿಸಿ : ‘PM KISAN’ ಹಣ ಜಮಾ ಆಗಲು ಕೂಡಲೇ `e-KYC’ ಮಾಡಿಸಿಕೊಳ್ಳಿ!