ಮೈಸೂರು : ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಪಕ್ಷಗಳು ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡಿ ಯಶಸ್ವಿಯಾಗಿವೆ. ಇದೀಗ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ವಿರುದ್ಧವು ಕೂಡ ಬಿಜೆಪಿ ಪಾದಯಾತ್ರೆ ಹಮ್ಕಿಕೊಳ್ಳಲಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.
ವಾಲ್ಮೀಕಿ ಹಗರಣದ ಕುರಿತಂತೆ ಮೈಸೂರಿನಲ್ಲಿ ಇಂದು ಪ್ರತಾಪ್ ಸಿಂಹ ಮಾಧ್ಯಮಗಳೊಂದಿಗೆ ಮಾತನಾಡಿ, ಸೆ.17ಕ್ಕೆ ವಾಲ್ಮೀಕಿ ಹಗರಣ ವಿಚಾರದಲ್ಲಿ ಪಾದಯಾತ್ರೆ ಮಾಡಲು ನಿರ್ಧಾರವಾಗಿದೆ. ಬೆಳಗಾವಿಯಲ್ಲಿ ನಡೆದದ್ದು ಬಿಜೆಪಿ ಅತೃಪ್ತರ ಬಂಡಾಯಗಾರರ ಸಭೆಯಲ್ಲ. ಬಿಜೆಪಿಯ ಜನಪ್ರಿಯ ನೇತಾರ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ನಡೆದ ಸಭೆ ಎಂದರು.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈ ಒಂದು ಪಾದಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿ ವೈ ವಿಜಯೇಂದ್ರ, ವಿಪಕ್ಷ ನಾಯಕbಆರ್ ಅಶೋಕ್, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಜೆಡಿಎಸ್ ಪಕ್ಷದ ಎಲ್ಲಾ ನಾಯಕರು ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.
ಆದರೆ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ರಮೇಶ್ ಜಾರಕಿಹೊಳಿ ಪಕ್ಷದ ವಿರುದ್ಧವೇ ಅಸಮಧಾನವಾಗಿದ್ದರು. ಹೀಗಾಗಿ ಸೆಪ್ಟೆಂಬರ್ 17ರಂದು ವಾಲ್ಮೀಕಿ ಹಗರಣದ ವಿರುದ್ಧ ಎರಡನೇ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.ನಾವು ಮೈಸೂರು ಚಲೋ ಪಾದಯಾತ್ರೆ ಅನುಭವದ ಹಂಚಿಕೊಂಡಿದ್ದೇವೆ. ವಾಲ್ಮೀಕಿ ಹಗರಣದ ವಿರುದ್ಧ ಸರಿಯಾದ ಹೋರಾಟ ನಡೆದರೆ ಸಿಎಂ ಕುರ್ಚಿ ಅಲ್ಲಾಡುತ್ತೆ. ಬಸನಗೌಡ ಪಾಟೀಲ್ ಯತ್ನಾಳ್ರಂತ ಬಹು ದೊಡ್ಡ ನಾಯಕರು ಕರೆದ ಕಾರಣ ನಾನು ಹೋಗಿದ್ದೆ ಎಂದು ಹೇಳಿದರು.