ನವದೆಹಲಿ : ದೇಶಾದ್ಯಂತ ಇಂದು ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದ್ದು, ರಾಜಧಾನಿ ದೆಹಲಿಯನ್ನು ತ್ರಿವರ್ಣ ಧ್ವಜದಿಂದ ಅಲಂಕರಿಲಾಗಿದ್ದು,. ಕೆಂಪು ಕೋಟೆ ವಧುವಿನಂತೆ ಸಿದ್ಧವಾಗಿದೆ.
ಈ ನಡುವೆ ಧ್ವಜಾರೋಹಣಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು, ರಾಜ್ ಘಾಟ್ ನಲ್ಲಿ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ.
Prime Minister Narendra Modi pays floral tributes to Mahatma Gandhi at Rajghat on #IndependenceDay2024
(Photo source: PM Modi/YouTube) pic.twitter.com/7sCjhfEmn5
— ANI (@ANI) August 15, 2024
ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಿಂದ 78 ನೇ ಸ್ವಾತಂತ್ರ್ಯ ದಿನಾಚರಣೆಗೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸತತ 11 ನೇ ಬಾರಿಗೆ ಕೆಂಪು ಕೋಟೆಯಲ್ಲಿ ಕೊತ್ತಲಗಳಿಂದ ರಾಷ್ಟ್ರಧ್ವಜವನ್ನು ಹಾರಿಸಲಿದ್ದಾರೆ.
ಈ ನಡುವೆ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಎಲ್ಲರಿಗೂ ಸ್ವಾತಂತ್ರ್ಯ ದಿನದ ಶುಭಾಶಯಗಳು. ಜೈ ಹಿಂದ್ ಎಂದು ಹೇಳಿದ್ದಾರೆ.