ವಿಜಯಪುರ : ಒಂದು ಕಡೆ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕೂಗು ಕೇಳಿ ಬರುತ್ತಿದ್ದರೆ, ಇನ್ನೊಂದೆಡೆ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ನಿಲ್ಲಿಸುತ್ತೆ ಎಂಬ ವದಂತಿ ಹಬ್ಬಿದೆ. ಇದೆಲ್ಲದರ ಮಧ್ಯ ವಿಜಯಪುರದ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗುವುದು ಗ್ಯಾರಂಟಿ ಎಂದು ಸ್ಪೋಟಕ ವಾದಂತಹ ಭವಿಷ್ಯ ನುಡಿದಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರ ಕುಂಟುತ್ತಿದೆ. ಇದು ಬಹಳ ದಿನ ನಿಲ್ಲುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಯಾವಾಗ ಬೀಳುತ್ತೋ ಗೊತ್ತಿಲ್ಲ. ಆದರೆ ಈ ಸರ್ಕಾರ ಬೀಳೋದು ಗ್ಯಾರಂಟಿ ಎಂದು ಸ್ಫೋಟಕವಾದಂತ ಭವಿಷ್ಯ ನುಡಿದರು.
ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿದೆ ನೀವು ನೋಡ್ತಾ ಇರಿ. ಗ್ಯಾರಂಟಿ ನಿಲ್ಲಿಸಲಿ ಬಿಡಲಿ ಅದು ಸರ್ಕಾರಕ್ಕೆ ಸಂಬಂಧಿಸಿದ ವಿಚಾರ. ಕಾಂಗ್ರೆಸ್ನವರು ಮುಂದೆ ಕಾಂಗ್ರೆಸ್ ಸರ್ಕಾರ ಏನು ಆಗುತ್ತೆ ಅನ್ನೋದು ನನಗೆ ಗೊತ್ತಿದೆ. ರಾಮಕೃಷ್ಣ ಹೆಗಡೆಯವರಿಗೆ ಮುಂದೆ ಏನಾಗುತ್ತೆ ಅನ್ನೋದು ಹೇಗೆ ಗೊತ್ತಾಗುತ್ತಿತ್ತೋ, ಹಾಗೆ ನಂಗು ಗೊತ್ತಾಗುತ್ತದೆ. ಮುಂದೆ ಏನಾಗುತ್ತೆ ಅನ್ನೋ ಚಿತ್ರಣ ನಮ್ಮ ಮುಂದಿದೆ ಎಂದು ವಿಜಯಪುರದಲ್ಲಿ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿ ಹೇಳಿಕೆ ನೀಡಿದರು.