ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾಮೇಶ್ವರಂ ಕೆಫೆಯ ನಂತ್ರ ಮತ್ತೊಂದು ನಿಗೂಢ ಸ್ಪೋಟ ಘಟನೆ ಎನ್ನುವಂತೆ ಜೆಪಿ ನಗರದಲ್ಲಿ ಕುಕ್ಕರ್ ಬ್ಲಾಸ್ಟ್ ಆಗಿ ಓರ್ವ ಸಾವನ್ನಪ್ಪಿದ್ದನು. ಈ ಘಟನೆಯ ನಂತ್ರ ಘಟನಾ ಸ್ಥಳಕ್ಕೆ ಎನ್ಐಎ ಟೀಂ ಎಂಟ್ರಿ ಕೊಟ್ಟಿದ್ದು, ಪರಿಶೀಲನೆ, ತನಿಖೆಯನ್ನು ನಡೆಸುತ್ತಿದೆ.
ಬೆಂಗಳೂರಿನ ಜೆಪಿ ನಗರದ 6ನೇ ಹಂತದಲ್ಲಿನ ಮನೆಯೊಂದರಲ್ಲಿ ಕುಕ್ಕರ್ ಬ್ಲಾಸ್ಟ್ ಆಗಿ, ಬಲ್ಬ್ ಗೆ ತಗುಲಿದ ಪರಿಣಾಮ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕೂಡ ಹೊತ್ತಿಕೊಂಡು ಉತ್ತರ ಪ್ರದೇಶ ಮೂಲದ ಮೋಸಿನ್ ಹಾಗೂ ಸಮೀರ್ ಗಂಭೀರವಾಗಿ ಗಾಯಗೊಂಡಿದ್ದರು. ಇವರನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಪಡೆಯುತ್ತಿದ್ದಂತ ಓರ್ವ ಮೋಸಿನ್ ನಿನ್ನೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದನು.
ಈ ಬೆನ್ನಲ್ಲೇ ಇಂದು ಎನ್ಐಎ ತಂಡ ಘಟನಾ ಸ್ಥಳಕ್ಕೆ ಎಂಟ್ರಿ ಕೊಟ್ಟಿದೆ. ಸ್ಪೋಟಕದ ಹಿಂದೆ ಉಗ್ರರ ಕೃತ್ಯದ ಶಂಕೆ ವ್ಯಕ್ತವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿರುವಂತ ಎನ್ಐಎ ತಂಡದ ಅಧಿಕಾರಿಗಳು, ಸ್ಥಳದಲ್ಲಿನ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
2024ರ ಮಹಿಳಾ ಟಿ20 ವಿಶ್ವಕಪ್ ಆತಿಥ್ಯ ವಹಿಸುವ ಐಸಿಸಿ ಪ್ರಸ್ತಾಪಕ್ಕೆ ಬಿಸಿಸಿಐ ಜಯ್ ಶಾ ವಿರೋಧ
BIGG NEWS: ‘KPTCL 226 ಜೆಇ ವರ್ಗಾವಣೆ’ಯಲ್ಲಿ ಮತ್ತೊಂದು ಕರ್ಮಕಾಂಡ: ಪುಲ್ ‘ಡೀಲ್ ಮಗಾ’ ಡೀಲ್
GOOD NEWS : 545 ‘PSI’ ಅಭ್ಯರ್ಥಿಗಳಿಗೆ ಶೀಘ್ರ ನೇಮಕಾತಿ ಆದೇಶ ಪತ್ರ ವಿತರಣೆ : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ