ಕೊಪ್ಪಳ: ಜಿಲ್ಲೆಯ ತುಂಗಭದ್ರಾ ಡ್ಯಾಂನ 19ನೇ ಗೇಟ್ ಕೊಚ್ಚಿ ಹೋಗಿತ್ತು. ಅದನ್ನು ರಿಪೇರಿ ಕಾರ್ಯವನ್ನು ಆರಂಭಿಸಲಾಗಿದೆ. ಐದು ದಿನಗಳ ಬಳಿಕ ಆರಂಭಗೊಂಡಿರುವಂತ ಕ್ರಸ್ಟ್ ಗೇಟ್ ರಿಪೇರಿ ಕಾರ್ಯದ ಸಂದರ್ಭದಲ್ಲಿ ಮೂರು ಬಾರಿ ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಹೀಗಾಗಿ ರಿಪೇರಿ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ.
ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಕೊಚ್ಚಿ ಹೋದ ನಂತ್ರ, ಅದನ್ನು ಮರು ಅಳವಡಿಸುವ ಕಾರ್ಯ ಮುಂದುವರೆದಿದೆ. ಸ್ಟಾಪ್ ಲಾಗ್ ಗೇಟ್ ಕೂರಿಸುವಾಗ ಸಣ್ಣ ಮಟ್ಟದ ತಾಂತ್ರಿಕ ಸಮಸ್ಯೆ ಉಂಟಾಗಿತ್ತು. ಇದನ್ನು ಸರಿಪಡಿಸೋದಕ್ಕೆ ನೀರಿಗಿಳಿದು ತಾಂತ್ರಿಕ ಸಿಬ್ಬಂದಿ ಕೆಲಸ ಮಾಡುತ್ತಿದ್ದರು. ಈ ವೇಳೆಯಲ್ಲೇ ಎರಡು ಬೃಹತ್ ಗಾತ್ರದ ಕ್ರೇನ್ ಗಳ ಮೂಲಕ ಸ್ಟಾಪ್ ಲಾಗ್ ಗೇಟ್ ಇಳಿಸಿ, ಇದೇ ಮಾದರಿಯಲ್ಲಿ 5 ಎಲಿಮೆಂಟ್ ಗಳನ್ನು ಇರಿಸಿ, ಕೂರಿಸುವ ಯೋಜನೆ ಹಾಕಲಾಗಿತ್ತು. ಈ ಕಾರ್ಯಾಚರಣೆಯಲ್ಲಿ 80ಕ್ಕೂ ಹೆಚ್ಚು ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ಮೊದಲ ಹಂತದ ಎಲಿಮೆಂಟ್ ಅಳವಡಿಕೆ ಯಶಸ್ವಿಯಾದಲ್ಲಿ 25 ಟಿಎಂಸಿ ನೀರನ್ನು ಜಲಾಶಯದಿಂದ ಹೋಗುವುದನ್ನು ನಿಲ್ಲಿಸೋದಕ್ಕೆ ಸಾಧ್ಯವಾಗುತ್ತದೆ. ಆದರೇ ಅದು ಸಾಧ್ಯವಾಗಿಲ್ಲ. ಮೂರು ಬಾರಿ ಪ್ರಯತ್ನಿಸಿದರೂ ಯತ್ನ ವಿಫಲಗೊಂಡಿದೆ. ಹೀಗಾಗಿ ಶುಕ್ರವಾರದ ನಾಳೆಗೆ ತಾತ್ಕಾಲಿಕ ಗೇಟ್ ಅಳವಡಿಕೆ ಕಾರ್ಯ ಮುಂದೂಡಲಾಗಿದೆ.
GOOD NEWS : 545 ‘PSI’ ಅಭ್ಯರ್ಥಿಗಳಿಗೆ ಶೀಘ್ರ ನೇಮಕಾತಿ ಆದೇಶ ಪತ್ರ ವಿತರಣೆ : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ
BIGG NEWS: ‘KPTCL 226 ಜೆಇ ವರ್ಗಾವಣೆ’ಯಲ್ಲಿ ಮತ್ತೊಂದು ಕರ್ಮಕಾಂಡ: ಪುಲ್ ‘ಡೀಲ್ ಮಗಾ’ ಡೀಲ್