ಶಿವಮೊಗ್ಗ : ರಾಜ್ಯದ ಶಾಲಾ ವಿದ್ಯಾರ್ಥಿಗಳ ಬ್ಯಾಗ್ ನ ಹೊರೆ ಕಡಿಮೆ ಮಾಡಲು ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಸರ್ಕಾರಿ ಶಾಲೆಗಳಲ್ಲಿ ನೋಟ್ ಬುಕ್ ಬದಲು ನೋಟ್ ಶೀಟ್ ಪರಿಚಯಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸುದ್ದಿಗಾರೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಶೀಘ್ರವೇ ನೋಟ್ ಬುಕ್ ಬದಲಿಗೆ ನೋಟ್ ಶೀಟ್ ನೀಡಲಾಗುವುದು. ಇದರಿಂದ ಶಾಲಾ ಮಕ್ಕಳ ಬ್ಯಾಗ್ ಹೊರೆ ಕಡಿಮೆಯಾಗಲಿದೆ ಎಂದು ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕದಲ್ಲಿ ಪ್ರಸಕ್ತ ಸಾಲಿನಿಂದ ಎಲ್ ಕೆಜಿ ಪ್ರಾರಂಭಿಸಿದ್ದು, 36 ಸಾವಿರ ಮಕ್ಕಳು ದಾಖಲಾಗಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ದ್ವಿತೀಯ ಪಿಯುಸಿವರೆಗೆ ದ್ವಿಭಾಷಾ ಬೋಧನಾ ಮಾಧ್ಯಮ ಪ್ರಾರಂಭಿಸಲಾಗುವುದು ಎಂದು ಹೇಳಿದ್ದಾರೆ.