ನವದೆಹಲಿ: ಇಂದು ಹರಿಯಾಣ, ಜಮ್ಮು-ಕಾಶ್ಮೀರ ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಪ್ರಕಟಿಸಲಾಗಿದೆ. ಈ ಬೆನ್ನಲ್ಲೇ ಕರ್ನಾಟಕದ ವಿಧಾನಸಭಾ ಉಪ ಚುನಾವಣೆ ಕೂಡ ಘೋಷಣೆಯಾಗಲಿದೆ ಎನ್ನಲಾಗುತ್ತಿತ್ತು. ಆದರೇ ಅವುಗಳ ದಿನಾಂಕವನ್ನು ಶೀಘ್ರವೇ ಪ್ರಕಟಿಸುವುದಾಗಿ ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.
ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಗ ಮೂರು ಹಂತದಲ್ಲಿ ಮತದಾನದ ಮೂಲಕ ಚುನಾವಣೆ ನಡೆಸಿ, ಅಕ್ಟೋಬರ್.4ರಂದು ಫಲಿತಾಂಶ ಪ್ರಕಟಿಸುವುದಾಗಿ ಹೇಳಿದರು.
ಇನ್ನೂ ಹರಿಯಾಣ ವಿಧಾನಸಭೆಯ 90 ಕ್ಷೇತ್ರಗಳಿಗೆ ಅಕ್ಟೋಬರ್ 1ರಂದು ಮತದಾನ ನಡೆದು, ಅಕ್ಟೋಬರ್.4ರಂದು ಮತಏಣಿಕೆ ಕಾರ್ಯ ನಡೆಸಿ ಫಲಿತಾಂಶವನ್ನು ಪ್ರಕಟಿಸುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆಯಿಂದ ತೆರವಾದಂತ ಚನ್ನಪಟ್ಟಣ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಂಸದರಾದ ಬಳಿಕ ರಾಜೀನಾಮೆ ನೀಡಿದ್ದಂತ ಶಿಗ್ಗಾಂವಿ ಕ್ಷೇತ್ರ ಹಾಗೂ ಬಳ್ಳಾರಿಯ ಇ.ತುಕಾರಂ ಅವರು ಸಂಸದರಾದ ನಂತ್ರ ಶಾಸಕ ಸ್ಥಾನಕ್ಕೆ ನೀಡಿದಂತ ರಾಜೀನಾಮೆಯಿಂದ ಸಂಡೂರು ಕ್ಷೇತ್ರಗಳಿಗೆ ಮುಂದಿನ ದಿನಗಳಲ್ಲಿ ಉಪ ಚುನಾವಣೆಗೆ ದಿನಾಂಕ ಪ್ರಕಟಿಸುವುದಾಗಿ ತಿಳಿಸಿದರು.
ಒಟ್ಟು 46 ಲೋಕಸಭಾ ಹಾಗೂ ವಿಧಾನಸಭಾ ಕ್ಷೇತ್ರಗಳು ಸೇರಿದ ಕ್ಷೇತ್ರಗಳಿಗೆ ಮುಂದಿನ ದಿನಗಳಲ್ಲಿ ಶೀಘ್ರವೇ ಉಪ ಚುನಾವಣೆ ಘೋಷಿಸುವುದಾಗಿ ಪ್ರಕಟಿಸಿದ್ದಾರೆ.
BREAKING: ‘ಪಶ್ಚಿಮಘಟ್ಟ’ದಲ್ಲಿ ಭೂಪರಿವರ್ತನೆಗೆ ತಾತ್ಕಾಲಿಕ ತಡೆ: ಸಚಿವ ಈಶ್ವರ ಖಂಡ್ರೆ
ಮಲಯಾಳಂನ ‘ಆಟ್ಟಂ’ ಚಿತ್ರಕ್ಕೆ ಅತ್ಯುತ್ತಮ ಚಲನಚಿತ್ರ ‘ರಾಷ್ಟ್ರೀಯ ಪ್ರಶಸ್ತಿ’ ಗೆಲುವು | Malayalam Movie Aattam