ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಭಾರಿ ಮಳೆ, ಬಿರುಗಾಳಿಯಿಂದಾಗಿ ಬೃಹತ್ ಮರ ಬಿದ್ದು ಆರು ಜನರಿಗೆ ಗಾಯವಾಗಿತ್ತು. ಇದೀಗ ಇಂದು ಕೂಡ ಬೆಂಗಳೂರಿನ ವಿಧಾನಸೌಧ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಿದ್ದು ವಾಹನ ಸವಾರರು ರಸ್ತೆಯಲ್ಲಿ ಚಲಿಸಲಾಗದೆ ಪರದಾಟ ನಡೆಸಿದರು.
ಹೌದು ಬೆಂಗಳೂರಿನ ಇಂದು ವರಮಹಾಲಕ್ಷ್ಮಿ ಹಬ್ಬದಂದೆ ವರುಣನ ಆಗಮನವಾಗಿದೆ. ನಗರದ ವಿಧಾನ ಸೌಧ, ಕಾರ್ಪೊರೇಷನ್ ಸರ್ಕಲ್, ಶಾಂತಿನಗರ, ರಿಚ್ಮಂಡ್ ಸರ್ಕಲ್ ಸೇರಿದಂತೆ ಹಲವೆಡೆ ಮಳೆ(Rain) ಆಗಿದ್ದು, ದಿಢೀರ್ ಮಳೆಯಿಂದಾಗಿ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಇನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲೂ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು, ಪೀಣ್ಯಾ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ, ಹೆಸರಘಟ್ಟ ಸೇರಿದಂತೆ ಹಲವಾರು ಕಡೆ ಮಳೆ ಆರಂಭವಾಗಿದೆ.