ಬೆಳಗಾವಿ : ಹಾಸ್ಟೆಲ್ ನಲ್ಲಿ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿಯೊಬ್ಬ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೀಡಸೋಸಿ ಗ್ರಾಮದಲ್ಲಿ ನಡೆದಿದೆ.
ಹೌದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೀಡಸೋಸಿ ಗ್ರಾಮದ ಶ್ರೀ ನೀಡಸೋಸಿ ಜಗದ್ಗುರು ಪಂಚಮ ನಿಜಲಿಂಗೇಶ್ವರ ಕಾಲೇಜು ಆವರಣದಲ್ಲಿರುವ ಹಾಸ್ಟೆಲ್ ನಲ್ಲಿ ಮಹಾರಾಷ್ಟ್ರದ ಸಾಂಗ್ಲಿ ಮೂಲದ ಮಯೂರ ಕುಂಬಾರ್ (17) ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ.
ಹಾಸ್ಟೆಲ್ ರೂಂ ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಮಯೂರ್ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ. ಪೋಷಕರು ಸ್ಥಳಕ್ಕೆ ಬಂದ ನಂತರ ಮರಣೋತ್ತರ ಪರೀಕ್ಷೆಗೆ ಶವ ಸ್ಥಳಾಂತರ ಗೊಳಿಸಲಾಯಿತು. ಘಟನೆ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.