ಬೆಂಗಳೂರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ನೊಂದಿಗಿನ ಎಲ್ಲಾ ವಹಿವಾಟುಗಳನ್ನು ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಬ್ಯಾಂಕಿನ ಮ್ಯಾನೇಜರ್ ಹಾಗೂ ಅಧಿಕಾರಿಗಳು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ 15 ದಿನಗಳ ಕಾಲ ಸಮಯಾವಕಾಶ ನೀಡಿ ಎಂದು ಮನವಿ ಮಾಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಖಾತೆ ಮುಚ್ಚಲು ತಾತ್ಕಾಲಿಕ ತಡೆ ನೀಡಿದೆ.
ಇಂದು ಸಿಎಂ ಭೇಟಿಯಾಗಿ 15 ದಿನಗಳ ಕಾಲ ಸಮಯಾವಕಾಶ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಎಸ್ ಬಿ ಐ ಮುಖ್ಯ ಪ್ರಧಾನ ವ್ಯವಸ್ಥಾಪಕ ವಿನೋದ್ ಜೈಸ್ವಾಲ್ ಮನವಿ ಮಾಡಿದ್ದಾರೆ. ಅಲ್ಲದೆ ಪಂಜಾಬ್ ನ್ಯಾಷನಲ್ ಬ್ಯಾಂಕಿನ ಅಧಿಕಾರಿಗಳಿಂದಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಕೆಐಎಡಿಬಿ ಸಂಸ್ಥೆ ಠೇವಣಿ ಮರುಪಾವತಿ ಬಗ್ಗೆ ಸಮಾವಕಾಶ ನೀಡಬೇಕು ಸಿಎಂ ಸಿದ್ದರಾಮಯ್ಯಗೆ ಎಸ್ ಬಿ ಐ ಪಿ ಏನ್ ಬಿ ಅಧಿಕಾರಿಗಳು ಮನವಿ ಮಾಡಿದ ಹಿನ್ನೆಲೆಯಲ್ಲಿ ಬ್ಯಾಂಕ್ ಖಾತೆ ಮುಚ್ಚುವ ನಿರ್ಧಾರಕ್ಕೆ ಸರ್ಕಾರದಿಂದ ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ಇನ್ನೂ ಕಳೆದ ಎರಡು ದಿನಗಳ ಹಿಂದೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ ನೊಂದಿಗಿನ ಎಲ್ಲಾ ವಹಿವಾಟುಗಳನ್ನು ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿರುವ ಮತ್ತು ಹಣಕಾಸು ಕಾರ್ಯದರ್ಶಿ ಹೊರಡಿಸಿದ ಆದೇಶದಲ್ಲಿ ಈ ಬ್ಯಾಂಕ್‌ಗಳಲ್ಲಿನ ಖಾತೆಗಳನ್ನು ಮುಚ್ಚಲು ಮತ್ತು ಠೇವಣಿಗಳನ್ನು ತಕ್ಷಣವೇ ಮರುಪಡೆಯಲು ರಾಜ್ಯದ ಎಲ್ಲಾ ಇಲಾಖೆಗಳಿಗೆ ಸೂಚಿಸಲಾಗಿತ್ತು.
ರಾಜ್ಯ ಸರ್ಕಾರದ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ನಿಗಮಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾನಿಲಯಗಳು ಮತ್ತು ಇತರ ಸಂಸ್ಥೆಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಹೊಂದಿರುವ ಖಾತೆಗಳನ್ನು ತಕ್ಷಣವೇ ಮುಕ್ತಾಯಗೊಳಿಸಬೇಕು. ಈ ಬ್ಯಾಂಕ್‌ಗಳಲ್ಲಿ ಯಾವುದೇ ಹೆಚ್ಚಿನ ಠೇವಣಿ ಅಥವಾ ಹೂಡಿಕೆಗಳನ್ನು ಮಾಡಬಾರದು ಎಂದು ತಿಳಿಸಲಾಗಿತ್ತು.