ಹುಬ್ಬಳ್ಳಿ : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರ ಕೈವಾಡವಿದೆ. ಹೀಗಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು. ರಾಜ್ಯಪಾಲರು ಸಿಎಂ ಸಿದ್ದರಾಮಯ್ಯಗೆ ಪ್ರಾಸಿಕ್ಯೂಷನ್ ಕೊಟ್ಟಿರುವುದು ಕಾಂಗ್ರೆಸ್ ನ ಹಲವು ನಾಯಕರು ಒಳಗೊಳಗೆ ಖುಷಿ ಪಡುತ್ತಿದ್ದಾರೆ ಎಂದರು.
ಬೃಹತ್ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಕಡತಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಡಿಯಲ್ಲಿ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.