ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ನಡುವೆಯೇ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ತ್ರಿಪುರವಾಸಿನಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದಾರೆ.
7 ನೇ ವೇತನ ಆಯೋಗ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರು ಇಂದು ನಮ್ಮಭಿಮಾನ ಅಭಿನಂದನೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ವೇದಿಕಗೆ ಬರುತ್ತಿದ್ದಂತಯೇ ಜೋರಾಗಿ ಕೂಗಿ ರಾಜ್ಯ ಸರ್ಕಾರಿ ನೌಕರರು ಸ್ವಾಗತ ಕೋರಿದ್ದಾರೆ.