ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ಕುರುಬ ಸಮುದಾಯ ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದು, ಇಂದು ಪ್ರತಿಭಟನೆಗೆ ಕರೆ ನೀಡಿದೆ.
ಬೆಂಗಳೂರಿನ ಗಾಂಧಿನಗರದ ಕುರುಬರ ಸಂಘದ ಬಳಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಡಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದೆ.