ಬೆಂಗಳೂರು: ಪ್ರಜಾಸತ್ತಾತ್ಮಕವಾಗಿ ಚುನಾಯಿತವಾಗಿರುವ ಸರ್ಕಾರವನ್ನು ದುರ್ಬಲಗೊಳಿಸಲು ಬಿಜೆಪಿ ರಾಜಭವನವನ್ನು ಸಾಧನವಾಗಿ ದುರುಪಯೋಗಪಡಿಸಿಕೊಳ್ಳತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ತಮ್ಮ ಎಕ್ಸ್ ಖಾತೆಯಲ್ಲಿ ರಾಜ್ಯಪಾಲರ ಕ್ರಮವನ್ನು ಟೀಕಿಸಿರುವ ಸಚಿವರು ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರು ತಮ್ಮ ರಾಜಕೀಯ ಯಜಮಾನರನ್ನು ಸಮಾಧಾನಪಡಿಸಲು ಸಾಂವಿಧಾನಿಕ ಬಿಕ್ಕಟ್ಟನ್ನು ಹುಟ್ಟುಹಾಕುತ್ತಿದ್ದಾರೆಎಂದಿದ್ದಾರೆ.
ಕೇಂದ್ರ ಸರ್ಕಾರ ತನ್ನ ಎಷ್ಟೇ ಶಕ್ತಿಯನ್ನು ಪ್ರಯೋಗಿಸಿದರೂ, ನಾವು ನಮ್ಮ ಪರವಾಗಿ ಸಂವಿಧಾನದೊಂದಿಗೆ ದೃಢವಾಗಿ ನಿಲ್ಲುತ್ತೇವೆ ಎಂದೂ ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ ಹೇಳಿದ್ದಾರೆ.
‘ಬಿಜೆಪಿ ಷಡ್ಯಂತ್ರ’ಕ್ಕೆ ಹೆದರುವ ಮಾತೇ ಇಲ್ಲ: ಸಚಿವ ಆರ್.ಬಿ ತಿಮ್ಮಾಪೂರ ಗುಡುಗು
BREAKING : ಪ್ರಾಸಿಕ್ಯೂಷನ್ ಗೆ ಅನುಮತಿ : `CM ಸಿದ್ದರಾಮಯ್ಯ’ ಬೆನ್ನಿಗೆ ನಿಂತ ಕುರುಬ ಸಮುದಾಯ